ADVERTISEMENT

ಮೀನುಗಾರಿಕೆಯಲ್ಲಿ ಷರತ್ತು ಪಾಲನೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಮೇ 2020, 14:34 IST
Last Updated 5 ಮೇ 2020, 14:34 IST
ಮೀನುಗಾರಿಕೆಗೆ ಷರತ್ತುಬದ್ಧ ಅನುಮತಿ ನೀಡಿರುವ ಕುರಿತು ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆಯಲ್ಲಿ ಕಾರವಾರದಲ್ಲಿ ಮಂಗಳವಾರ ಸಭೆ ಹಮ್ಮಿಕೊಳ್ಳಲಾಯಿತು
ಮೀನುಗಾರಿಕೆಗೆ ಷರತ್ತುಬದ್ಧ ಅನುಮತಿ ನೀಡಿರುವ ಕುರಿತು ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆಯಲ್ಲಿ ಕಾರವಾರದಲ್ಲಿ ಮಂಗಳವಾರ ಸಭೆ ಹಮ್ಮಿಕೊಳ್ಳಲಾಯಿತು   

ಕಾರವಾರ: ಜಿಲ್ಲೆಯಲ್ಲಿ ಮೀನುಗಾರಿಕೆಗೆ ಷರತ್ತುಬದ್ಧ ಅನುಮತಿ ನೀಡುವ ನಿಟ್ಟಿನಲ್ಲಿ ಕಾರವಾರ ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ಹಮ್ಮಿಕೊಳ್ಳಲಾಯಿತು.

ಮೀನುಗಾರ ಮುಖಂಡರು, ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಮೀನುಗಾರಿಕೆ ಸಂದರ್ಭದಲ್ಲಿಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮೀನುಗಾರರ ಹಾಗೂ ಗ್ರಾಹಕರ ನಡುವೆಅಂತರ ಕಾಯ್ದುಕೊಳ್ಳಲೇಬೇಕು. ಸ್ಯಾನಿಟೈಸರ್ ಅನ್ನು ಆಗಾಗ ಬಳಸಬೇಕು ಎಂದು ಮೀನುಗಾರರಿಗೆ ಶಾಸಕಿ ಸೂಚಿಸಿದ್ದಾರೆ.

ಶಿರಸಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ ಅವರೊಂದಿಗೆ ಈ ಕುರಿತು ಚರ್ಚಿಸಿದ್ದರು. ಇದೇರೀತಿ, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾತುಕತೆ ನಡೆಸಿದ್ದರು.

ADVERTISEMENT

ಸಭೆಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಪಿ.ನಾಗರಾಜ, ತಾಲ್ಲೂಕುಪಂಚಾಯ್ತಿಕಾರ್ಯ ನಿರ್ವಾಹಣಾ ಅಧಿಕಾರಿ ಡಾ.ಆನಂದಕುಮಾರ ಬಾಲಪ್ಪನವರ, ತಹಶೀಲ್ದಾರ್ ಆರ್.ವಿ.ಕಟ್ಟಿ, ಡಿ.ವೈ.ಎಸ್.‌ಪಿ ಅರವಿಂದ ಕಲಗುಜ್ಜಿ, ಮೀನುಗಾರ ಮುಖಂಡರಾದ ಗಣಪತಿ ಉಳ್ವೇಕರ, ಗಣಪತಿ ಮಾಂಗ್ರೆ, ಕೆ.ಟಿ.ತಾಂಡೇಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.