ADVERTISEMENT

ಶಾಸಕ ಹೆಬ್ಬಾರ ರಾಜೀನಾಮೆ ಸಲ್ಲಿಸುವುದು ಒಳಿತು: ಕಾಗೇರಿ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 16:31 IST
Last Updated 13 ಜೂನ್ 2024, 16:31 IST
ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ   

ಕಾರವಾರ: ‘ಪಕ್ಷದ ಸಿದ್ಧಾಂತದ ಚೌಕಟ್ಟಿನಲ್ಲಿ ಇರಲು ಕಷ್ಟವಾದರೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ರಾಜೀನಾಮೆ ನೀಡಿ ಪುನಃ ಜನಾದೇಶ ಪಡೆಯಲು ಹೋಗುವುದು ಒಳಿತು. ಇದು ತಾಂತ್ರಿಕವಾಗಿ ನಾನು ಅವರಿಗೆ ನೀಡುವ ಸಲಹೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉತ್ತರ ಕನ್ನಡದ ಏಕೈಕ ಬಿಜೆಪಿ ಶಾಸಕ ದಿನಕರ ಶೆಟ್ಟಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಗೆಲುವಿಗೆ ಶ್ರಮಿಸಿದ್ದಾರೆ ಎನ್ನುವ ಮೂಲಕ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಅವರನ್ನು ಬಿಜೆಪಿಯವರಲ್ಲ’ ಎಂದು ಪರೋಕ್ಷವಾಗಿ ಹೇಳಿದರು.

‘ಕಾಂಗ್ರೆಸ್ ವಿರುದ್ಧ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಅಂತರದ ಗೆಲುವು ದಾಖಲಿಸಿರುವುದು ಪಕ್ಷ ಬಲಿಷ್ಠವಾಗಿದೆ ಎಂಬುದನ್ನು ಸಾಬೀತುಮಾಡಿದೆ’ ಎಂದರು.

ADVERTISEMENT

‘ರಾಜ್ಯ ಸರ್ಕಾರದ ಒಂದು ವರ್ಷದ ಅವಧಿ ಭ್ರಮನಿರಸನ ಸೃಷ್ಟಿಸಿದೆ ಎಂಬುದು ಚುನಾವಣೆಯ ಫಲಿತಾಂಶದಲ್ಲಿ ಪ್ರತಿಫಲಿಸಿದೆ. ಅಲ್ಪಸಂಖ್ಯಾತರ ಓಲೈಕೆಯಲ್ಲೇ ಆಡಳಿತ ಸಾಗಿದೆ. ಜನಸಾಮಾನ್ಯರ ಜೀವಕ್ಕೆ ಬೆಲೆ ಇಲ್ಲದಂತಹ ಸ್ಥಿತಿ ಸೃಷ್ಟಿಯಾಗಿದೆ. ಕಾಂಗ್ರೆಸ್ ಆಡಳಿತದ ಎಲ್ಲ ವಿಭಾಗಗಳಲ್ಲಿಯೂ ವಿಫಲವಾಗಿದೆ. ಅಭಿವೃದ್ಧಿ ನಿಂತ ನೀರಾಗಿದೆ. ಇನ್ನಾದರೂ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡಲಿ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ಹೆಗಡೆ, ನಾಗರಾಜ ನಾಯಕ, ರಾಜೇಂದ್ರ ನಾಯ್ಕ, ಸದಾನಂದ ಭಟ್, ಗಜಾನನ ಗುನಗಾ, ಪ್ರಶಾಂತ ನಾಯ್ಕ, ಪ್ರಕಾಶ ನಾಯ್ಕ, ಕಿಶನ್ ಕಾಂಬ್ಳೆ, ನಯನಾ ನೀಲಾವರ, ಇತರರು ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.