ADVERTISEMENT

ಕಸ್ತೂರಿ ರಂಗನ್‌ ವರದಿ ಒಪ್ಪಲು ಸಾಧ್ಯವಿಲ್ಲ: ಹೆಬ್ಬಾರ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 15:36 IST
Last Updated 4 ಸೆಪ್ಟೆಂಬರ್ 2024, 15:36 IST
ಮುಂಡಗೋಡ ತಾಲ್ಲೂಕಿನ ಸನವಳ್ಳಿ ಜಲಾಶಯಕ್ಕೆ ಶಾಸಕ ಶಿವರಾಮ ಹೆಬ್ಬಾರ ಬಾಗಿನ ಅರ್ಪಿಸಿದರು
ಮುಂಡಗೋಡ ತಾಲ್ಲೂಕಿನ ಸನವಳ್ಳಿ ಜಲಾಶಯಕ್ಕೆ ಶಾಸಕ ಶಿವರಾಮ ಹೆಬ್ಬಾರ ಬಾಗಿನ ಅರ್ಪಿಸಿದರು   

ಮುಂಡಗೋಡ: ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಈ ವರದಿಯು ಮಲೆನಾಡು ಜೀವನ ಶೈಲಿಗೆ ಮಾರಕವಾಗಿದ್ದು, ಜನರ ಮೇಲೆ ದುಷ್ಪರಿಣಾಮ ಬೀರುತ್ತದೆ. ಪರಿಸರ ರಕ್ಷಣೆ ಮಾಡಬೇಕೆಂಬ ಹೆಸರಿನಲ್ಲಿ ಜನಜೀವನವನ್ನೇ ವ್ಯರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ಕೇರಳದ ಮುಖ್ಯಮಂತ್ರಿ ಸಹ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕಾರ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯು ಮಲೆನಾಡು ಜಿಲ್ಲೆಗಳಲ್ಲಿಯೇ ಅತಿ ಹೆಚ್ಚು ಅರಣ್ಯ ಪ್ರದೇಶ ಹೊಂದಿದ ಪ್ರದೇಶವಾಗಿದೆ. ಇಂತಹ ಜಿಲ್ಲೆಯಲ್ಲಿ ಶೇ 80ರಷ್ಟು ಪ್ರದೇಶದಲ್ಲಿ ಮನೆ ಕಟ್ಟಬಾರದು, ಸೊಪ್ಪು ಕಡಿಯಬಾರದು, ಮಣ್ಣು ಮುಟ್ಟಬಾರದು ಎಂದು ಕಸ್ತೂರಿ ರಂಗನ್ ಮತ್ತು ಗಾಡ್ಗಿಲ್ ವರದಿ ನೀಡಿದೆ. ಕಸ್ತೂರಿ ರಂಗನ್ ವರದಿಯನ್ನು ಈ ಹಿಂದೆಯೇ ಮಲೆನಾಡಿನ ಎಲ್ಲ ಶಾಸಕರು ತಿರಸ್ಕಾರ ಮಾಡಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವರು, ಮಲೆನಾಡು ಪ್ರದೇಶದ ಎಲ್ಲ ಶಾಸಕರ ಸಭೆ ಕರೆದು, ಅಭಿಪ್ರಾಯವನ್ನು ಕ್ರೋಡೀಕರಣ ಮಾಡಬೇಕು ಎಂದರು.

ಮಲೆನಾಡಿನ ಜನಜೀವನವನ್ನು ವ್ಯರ್ಥ ಮಾಡುವಂತ ದುಸ್ಥಿತಿಗೆ ಕರೆದುಕೊಂಡು ಹೋಗುವ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡದೇ ಅನ್ಯಮಾರ್ಗವಿಲ್ಲ. ಹೀಗಾಗಿ ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವರು ಮಲೆನಾಡಿನ ಶಾಸಕರ ಸಭೆ ಕರೆದು ಅಂತಿಮ ರೂಪವನ್ನು ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.