ಕಾರವಾರ: ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ ಅವರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರನ್ನು ಗುರುವಾರ ಭೇಟಿ ಮಾಡಿ ಅಭಿವೃದ್ಧಿ ಕೆಲಸಗಳ ಕುರಿತು ಚರ್ಚಿಸಿದರು.
‘ಮಳೆಗಾಲದಲ್ಲಿ ಜಿಲ್ಲೆಯ ಕರಾವಳಿ ತೀರದಲ್ಲಿ ಕಡಲ ಕೊರೆತ ಸಮಸ್ಯೆ ಗಂಭೀರವಾಗುತ್ತಿದ್ದು, ಸಂತ್ರಸ್ತ ಪ್ರದೇಶಗಳಲ್ಲಿ ತುರ್ತು ಸುರಕ್ಷತಾ ಕ್ರಮ ಕೈಗೊಳ್ಳಬೇಕು’ ಎಂದು ಉಳ್ವೇಕರ ಸೂಚಿಸಿದರು.
‘ನಗರದ ಗಾಂಧಿ ಮಾರುಕಟ್ಟೆಯ ಬಳಿ ನೂತನ ಕಟ್ಟಡ ನಿರ್ಮಾಣ ಯೋಜನೆ ತ್ವರಿತವಾಗಿ ಅನುಷ್ಠಾನಕ್ಕೆ ತರಬೇಕಿದೆ. ಕಡಲತೀರದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ಜತೆಗೆ ಪ್ರವಾಸಿ ಸೌಕರ್ಯಗಳನ್ನು ಸುಸ್ಥಿತಿಯಲ್ಲಿಡಲು ಕೆಲಸ ಮಾಡಬೇಕಾಗಿದೆ. ನಗರಸಭೆ ವ್ಯಾಪ್ತಿಯಲ್ಲಿರುವ ಉದ್ಯಾನಗಳ ನಿರ್ವಹಣೆಯಲ್ಲಿ ಲೋಪ ಉಂಟಾಗುತ್ತಿದ್ದು, ಸೂಕ್ತ ರೀತಿಯಲ್ಲಿ ಉದ್ಯಾನ ನಿರ್ವಹಣೆಗೆ ಕ್ರಮವಹಿಸಬೇಕು’ ಎಂದೂ ಹೇಳಿದರು.
ನಗರಸಭೆ ಸದಸ್ಯ ಡಾ.ನಿತಿನ್ ಪಿಕಳೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.