ಭಟ್ಕಳ: ತಾಲ್ಲೂಕಿನ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಶಿಕ್ಷಕ ಎಂ.ಎನ್.ನಾಯ್ಕ ಅವಿರೊಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಕಾರ್ಯಲಯದಲ್ಲಿ ಸೊಮವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ನೂತನ ರಾಜ್ಯ ಪರಿಷತ್ ಸದಸ್ಯರಾಗಿ ಕುಂಟವಾನೀ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಕುಮಾರ ನಾಯ್ಕ, ಖಜಾಂಚಿಯಾಗಿ ಮಾವಳ್ಳಿ ಗ್ರಾಮ ಆಡಳಿತಾಧಿಕಾರಿ ಚರಣ ಗೌಡ ಅವಿರೊಧವಾಗಿ ಆಯ್ಕೆಯಾಗಿದ್ದಾರೆ. ಸಂಗದ ನೂತನ ಕಾರ್ಯದರ್ಶಿಯಾಗಿ ಶಿಕ್ಷಕ ವೇಂಕಟೇಶ ನಾಯ್ಕ ನೇಮಕವಾಗಿದ್ದಾರೆ.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಘವೇಂದ್ರ ನಾಯ್ಕ, ಚುನಾವಣಾಧಿಕಾರಿಯಾಗಿ ತಾಲ್ಲೂಕು ಪಂಚಾಯಿತಿ ಅಧಿಕಾರಿ ಕರಿಯಪ್ಪ ನಾಯ್ಕ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.