ಕಾರವಾರ: ಜಿಲ್ಲೆಯಲ್ಲಿ ಹಾದುಹೋಗಿರುವ ಕಾರವಾರದಿಂದ ಭಟ್ಕಳ ತಾಲ್ಲೂಕಿನ ಗಡಿಭಾಗದ ವರೆಗಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿ, ಒತ್ತಾಯಿಸಿದ್ದಾರೆ.
‘ಚತುಷ್ಪಥ ಹೆದ್ದಾರಿಯ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಕೆಲವೆಡೆ ಸರಿಯಾಗಿ ಕಾಮಗಾರಿ ನಡೆಸದ ಪರಿಣಾಮ ಅವಘಡಗಳು ಸಂಭವಿಸುತ್ತಿವೆ. ಅವೈಜ್ಞಾನಿಕವಾಗಿ ಕೆಲಸ ನಡೆದಿದ್ದ ಸ್ಥಳಗಳಲ್ಲಿ ಸರಿಯಾಗಿ ಕೆಲಸ ನಡೆಯಬೇಕು. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.
‘ಸಾಗರ ಮಾಲಾ ಯೋಜನೆಯಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶಿರಸಿ–ಕುಮಟಾ, ಶಿರಸಿ–ಹಾನಗಲ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಮಳೆಗಾಲದಲ್ಲಿ ಸೂಕ್ತ ರೀತಿಯಲ್ಲಿ ರಸ್ತೆ ನಿರ್ವಹಣೆ ಮಾಡಬೇಕು’ ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.