ಮುಂಡಗೋಡ (ಉತ್ತರ ಕನ್ನಡ): ತಾಲ್ಲೂಕಿನ ಚಿಗಳ್ಳಿ ಗ್ರಾಮದಲ್ಲಿ ಕಲ್ಮೇಶ್ವರ ದೇವಸ್ಥಾನದ ಹತ್ತಿರ ದೀಪಾವಳಿ ಅಂಗವಾಗಿ ಶನಿವಾರ ಆಯೋಜಿಸಿದ್ದ ದನ ಬೆದರಿಸುವ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದ ಯುವಕ ಪರಮೇಶ್ವರ ಸಿದ್ಧಪ್ಪ ಹರಿಜನ (22) ಎಂಬುವವರಿಗೆ ಹೋರಿಯೊಂದು ಕೊಂಬಿನಿಂದ ತಿವಿದಿದೆ. ಅವರು ಮೃತಪಟ್ಟಿದ್ದಾರೆ.
ತಕ್ಷಣ ಯುವಕನನ್ನು ಇಲ್ಲಿನ ತಾಲ್ಲೂಕು ಆಸ್ಪತ್ರೆಗೆ ಕರೆತಂದರೂ, ಮಾರ್ಗಮಧ್ಯೆದಲ್ಲಿಯೇ ಆತ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ದನ ಬೆದರಿಸುವ ಕಾರ್ಯಕ್ರಮದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಆರು ಜನರ ಮೇಲೆ ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.