ADVERTISEMENT

ಶಿರಸಿ: ರಾಷ್ಟ್ರೀಯ ಯುವ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2024, 14:15 IST
Last Updated 12 ಜನವರಿ 2024, 14:15 IST
ಶಿರಸಿಯಲ್ಲಿ ಆಯೋಜಿಸಿದ್ದ ಯುವ ದಿನಾಚರಣೆ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು
ಶಿರಸಿಯಲ್ಲಿ ಆಯೋಜಿಸಿದ್ದ ಯುವ ದಿನಾಚರಣೆ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು    

ಶಿರಸಿ: ನಗರದ ಎಂ.ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು. 

ಮಹಾವಿದ್ಯಾಲಯದ ಉಪಸಮಿತಿ ಅಧ್ಯಕ್ಷ ಎಸ್.ಕೆ.ಭಾಗವತ್ ಪುಷ್ಪ ಸಮರ್ಪಿಸಿ ಮಾತನಾಡಿ, 'ಯುವಕರು ಸದಾ ಕ್ರಿಯಾಶೀಲರಾಗಿರಬೇಕು. ದೇಶಕ್ಕಾಗಿ ಬದುಕುವ ಕನಸು ಕಾಣಬೇಕು. ಸ್ವಾಮಿ ವಿವೇಕಾನಂದರ ತತ್ವಾದರ್ಶಗಳ ಪಾಲನೆ ಮೂಲಕ ಉತ್ತಮ ಸಮಾಜ ನಿರ್ಮಿಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು" ಎಂದರು. 

ಪ್ರಾಚಾರ್ಯ ಟಿ.ಎಸ್.ಹಳೆಮನೆ ಸೇರಿದಂತೆ ಪ್ರಾಧ್ಯಾಪಕರು ಪುಷ್ಪ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಮೇಳವನ್ನು ಆಯೋಜಿಸಲಾಗಿತ್ತು. ವಿವಿಧ ಬಗೆಯ ತಿಂಡಿ ತಿನಿಸಿನ ಅನೇಕ ಅಂಗಡಿಗಳನ್ನು ವಿದ್ಯಾರ್ಥಿಗಳು ತೆರೆದಿದ್ದರು. ವಿದ್ಯಾರ್ಥಿಗಳು ಪ್ರಾಧ್ಯಾಪಕರಾದಿಯಾಗಿ ತಿಂಡಿಗಳನ್ನು ಸವಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.