ಗೋಕರ್ಣ: ಇಲ್ಲಿಯ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ಜಾರಿಯಲ್ಲಿದ್ದ ವಸ್ತ್ರಸಂಹಿತೆಯಲ್ಲಿ ಬದಲಾವಣೆ ತರಲಾಗಿದೆ. ಪುರುಷರಿಗೆ ಧೋತಿ ಮತ್ತು ಶಲ್ಯ, ಹೆಂಗಸರಿಗೆ ಸೀರೆ ಅಥವಾ ಚೂಡಿದಾರ ಧರಿಸುವುದು ಕಡ್ಡಾಯ ಮಾಡಲಾಗಿದೆ. ಅವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
2018ರಿಂದ ಜಾರಿಯಲ್ಲಿದ್ದ ವಸ್ತ್ರಸಂಹಿತೆಯಲ್ಲಿ ಬರ್ಮುಡಾ ಪ್ಯಾಂಟ್ ಧರಿಸಿ ಬಂದವರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆದರೆ, ಈಗ ಪ್ಯಾಂಟ್ ಧರಿಸಿ ಬಂದವರಿಗೂ ನಿರ್ಬಂಧ ವಿಧಿಸಲಾಗಿದೆ. ಕೇವಲ ಭಾರತೀಯ ಶೈಲಿಯ ಉಡುಪು ಧರಿಸಿದವರು ಮಾತ್ರ ದೇವಸ್ಥಾನ ಪ್ರವೇಶಿಸಬಹುದು ಎಂದು ಆಡಳಿತಾಧಿಕಾರಿ ಜಿ.ಕೆ.ಹೆಗಡೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.