ಕಾರವಾರ:ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಇರುವ ಸೌಲಭ್ಯಗಳ ಕುರಿತು ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿಗುರುವಾರ ನಡೆದ ಪ್ರಧಾನಮಂತ್ರಿಗಳ ಹೊಸ15ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರಗಳಿಂದ ತಮಗೆ ಇರುವ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಅಲ್ಪಸಂಖ್ಯಾತರಲ್ಲಿ ಕಡಿಮೆ ಮಾಹಿತಿಯಿದೆ. ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಇಲಾಖೆ ಪ್ರತಿ ತಿಂಗಳು ಎರಡು ಬಾರಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.ಅರಿವು ಮಾಹಿತಿ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸದೆ ಬಾಗಿಲು ಮುಚ್ಚಿವೆ ಎಂಬ ದೂರುಗಳು ಬಂದಿವೆ. ಇಲಾಖೆಯು ಅವುಗಳತ್ತ ಗಮನ ಹರಿಸಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಗುಡ್ಡಪ್ಪ ಮಾತನಾಡಿ, ‘ಭಾಗ್ಯಲಕ್ಷ್ಮೀ ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳ221 ಮಕ್ಕಳಿಗೆ ಮಂಜೂರಾತಿ ನೀಡಲಾಗಿದೆ.ಈ ಸಾಲಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಟ್ಟು168 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಕಾರವಾರ ಮತ್ತು ಶಿರಸಿ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆಅರ್ಜಿ ಆಹ್ವಾನಿಸಲಾಗಿದೆ’ ಎಂದು ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್ಅವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.