ADVERTISEMENT

‘ಬೆಂಗಳೂರು ಚಲೋ’ ಪ್ರತಿಭಟನೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2024, 16:54 IST
Last Updated 28 ಅಕ್ಟೋಬರ್ 2024, 16:54 IST
ಹೊನ್ನಾವರದಲ್ಲಿ ಸೋಮವಾರ ನಡೆದ ಅರಣ್ಯ ಅತಿಕ್ರಮಣಕಾರರ ಸಭೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಮಾತನಾಡಿದರು
ಹೊನ್ನಾವರದಲ್ಲಿ ಸೋಮವಾರ ನಡೆದ ಅರಣ್ಯ ಅತಿಕ್ರಮಣಕಾರರ ಸಭೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಮಾತನಾಡಿದರು   

ಹೊನ್ನಾವರ: ‘ಕಸ್ತೂರಿ ರಂಗನ್ ವರದಿ ವಿರೋಧಿಸಿ ಹಾಗೂ ಅರಣ್ಯ ಭೂಮಿ ಸಕ್ರಮಾತಿಗೆ ಆಗ್ರಹಿಸಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ವತಿಯಿಂದ ನ.7ರಂದು ನಡೆಯಬೇಕಿದ್ದ ‘ಬೆಂಗಳೂರು ಚಲೋ’ ಪ್ರತಿಭಟನೆಯನ್ನು ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ನ.21ಕ್ಕೆ ಮುಂದೂಡಲಾಗಿದೆ’ ಎಂದು ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಸೋಮವಾರ ಇಲ್ಲಿ ನಡೆದ ಅರಣ್ಯ ಅತಿಕ್ರಮಣಕಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮುಂದೂಡುವಂತೆ ಸಚಿವರಿಂದ ಸೂಚನೆ ಬಂದಿದೆ. ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸರ್ಕಾರ ಬೇಡಿಕೆ ಈಡೇರಿಸುವುದಕ್ಕೆ ಸಂಬಂಧಿಸಿದಂತೆ ಆಶ್ವಾಸನೆ ನೀಡುವಂತಿಲ್ಲ’ ಎಂದುದರು.

ADVERTISEMENT

ಸುರೇಶ ಮೇಸ್ತ, ರಾಮ ಮರಾಠಿ, ಸುರೇಶ ನಾಯ್ಕ, ಮಹೇಶ ನಾಯ್ಕ ಕಾನಕ್ಕಿ, ಆರ್.ಎಚ್.ನಾಯ್ಕ, ಗಜಾನನ ನಾಯ್ಕ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.