ADVERTISEMENT

ಶಿರಸಿ–ಕುಮಟಾ ಹೆದ್ದಾರಿ ಸಂಚಾರ ಸ್ಥಗಿತಗೊಳಿಸಿದರೆ ಪ್ರತಿಭಟನೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2024, 14:36 IST
Last Updated 5 ನವೆಂಬರ್ 2024, 14:36 IST
ಶಿರಸಿ–ಕುಮಟಾ ರಾಷ್ಟ್ರೀಯ ಹೆದ್ದಾರಿಯ ಹಾರೂಗಾರ ಬಳಿ ಹೆದ್ದಾರಿಗೆ ಬ್ಯಾರಿಕೇಡ್ ಅಳವಡಿಸಿರುವುದು
ಶಿರಸಿ–ಕುಮಟಾ ರಾಷ್ಟ್ರೀಯ ಹೆದ್ದಾರಿಯ ಹಾರೂಗಾರ ಬಳಿ ಹೆದ್ದಾರಿಗೆ ಬ್ಯಾರಿಕೇಡ್ ಅಳವಡಿಸಿರುವುದು   

ಕಾರವಾರ: ಶಿರಸಿ–ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ಕಾಮಗಾರಿ ಸಲುವಾಗಿ ಹೆದ್ದಾರಿ ಸಂಚಾರಿ ಸ್ಥಗಿತಗೊಳಿಸಲು ಅವಕಾಶ ನೀಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಟಿ.ನಾರಾಯಣ ಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಭಾಸ್ಕರ ಪಟಗಾರ ಆಗ್ರಹಿಸಿದ್ದಾರೆ.

‘ಹೆದ್ದಾರಿ ಕಾಮಗಾರಿ ಕೈಗೊಂಡಿರುವ ಆರ್.ಎನ್.ಎಸ್ ಇನ್‍ಫ್ರಾಸ್ಟ್ರಕ್ಚರ್ ಕಂಪನಿಯು ನಾಲ್ಕು ವರ್ಷವಾದರೂ ಕೆಲಸ ಪೂರ್ಣಗೊಳಿಸಿಲ್ಲ. ಒಂದು ವೇಳೆ ಹೆದ್ದಾರಿ ಸಂಚಾರ ಸ್ಥಗಿತಗೊಳಿಸಿ, ಕೆಲಸ ಮಾಡಲು ಅವಕಾಶ ಮಾಡಿಕೊಟ್ಟರೆ ಮತ್ತೆ ಮೂರು ವರ್ಷವಾದರೂ ಕೆಲಸ ಪೂರ್ಣಗೊಳಿಸಲಾಗದು ಎಂಬ ಶಂಕೆ ಇದೆ’ ಎಂದು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ದೂರಿದರು.

‘ಜಿಲ್ಲೆಯ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಈ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಿ, ಆದೇಶಿಸಿದರೆ ಪ್ರತಿಭಟನೆ ನಡೆಸುತ್ತೇವೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.