ADVERTISEMENT

ಫೇಸ್‌ಬುಕ್‌ನಲ್ಲಿ ರಾಹುಲ್ ಗಾಂಧಿಗೆ ಅವಮಾನ: ಮಹಿಳೆ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 15:52 IST
Last Updated 9 ಜುಲೈ 2024, 15:52 IST
   

ಕುಮಟಾ (ಉತ್ತರ ಕನ್ನಡ ಜಿಲ್ಲೆ) : ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾವಚಿತ್ರಕ್ಕೆ ಚಪ್ಪಲಿ ಮುದ್ರೆ ಇಟ್ಟ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಬೆಂಗಳೂರಿನ ಹೋಂಟೌನ್ ನಿವಾಸಿ ನಂದಿನಿ ಭಂಡಾರಕರ್ ಎಂಬುವರ ವಿರುದ್ಧ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ತಾಲ್ಲೂಕಿನ ಆರ್.ಎಚ್.ನಾಯ್ಕ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಗಳವಾರ ದೂರು ನೀಡಿದ್ದಾರೆ.

‘ನಂದಿನಿ ಭಂಡಾರಕರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಭಾವನೆಗೆ ಘಾಸಿಗೊಳಿಸಿ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಉದ್ದೇಶ ಹೊಂದಿದ್ದಾರೆ. ನಂದಿನಿ  ಅವರ ಪೋಸ್ಟ್‌ಗೆ ಫೇಸ್‌ಬುಕ್‌ನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಕ್ಷಣ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಬೇಕು’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT