ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ:ಜನಜೀವನ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 4:30 IST
Last Updated 4 ಜುಲೈ 2024, 4:30 IST
   

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ತಡರಾತ್ರಿಯಿಂದಲೂ ಧಾರಾಕಾರ ಮಳೆ ಸುರಿಯತೊಡಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ಶಿರಸಿ, ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ.

ಸತತ ಮಳೆಯ ಪರಿಣಾಮ ಅಘನಾಶಿನಿ ನದಿಯ ಉಪನದಿ ಚಂಡಿಕಾ ಉಕ್ಕೇರಿದ್ದು ಕುಮಟಾ ತಾಲ್ಲೂಕಿನ ಕತಗಾಲ ಬಳಿ ಶಿರಸಿ-ಕುಮಡಾ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ. ಪರಿಣಾಮವಾಗಿ ಶಿರಸಿ ಮತ್ತು ಕುಮಟಾ ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೆದ್ದಾರಿಯಲ್ಲಿ ವಾಹನಗಳು ಸಿಲುಕಿಕೊಂಡಿವೆ.

ADVERTISEMENT

ಸದ್ಯ ವಾಹನಗಳು ಸಿದ್ದಾಪುರ ಮಾರ್ಗವಾಗಿ ಕುಮಟಾಕ್ಕೆ ಸಂಚರಿಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.