ADVERTISEMENT

ರಾಮಮಂದಿರ ರಾಜಕಾರಣದ ವಿಚಾರವಲ್ಲ: ಭೀಮಣ್ಣ

​ಪ್ರಜಾವಾಣಿ ವಾರ್ತೆ
Published 3 ಜನವರಿ 2024, 14:15 IST
Last Updated 3 ಜನವರಿ 2024, 14:15 IST
ಭೀಮಣ್ಣ ನಾಯ್ಕ
ಭೀಮಣ್ಣ ನಾಯ್ಕ   

ಕಾರವಾರ: ‘ರಾಮ ಮಂದಿರ ಕೋಟ್ಯಂತರ ಜನರ ಭಕ್ತಿ, ಶೃದ್ಧೆಯ ಕೇಂದ್ರ. ಆದರೆ ಅದನ್ನು ರಾಜಕಾರಣಕ್ಕೆ ಬಳಸಿಕೊಳ್ಳುವುದು ಸರಿಯಲ್ಲ’ ಎಂದು ಶಿರಸಿ ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಇಲ್ಲಿ ಬುಧವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಧರ್ಮದ ವಿಚಾರವನ್ನು ಮುಂದಿಟ್ಟು ರಾಜಕಾರಣ ಮಾಡುವುದು ಬಿಜೆಪಿಯ ಗುಣ. ಧರ್ಮದ ಮೇಲೆ ನಂಬಿಕೆ ಹೊಂದಿರುವ ಪ್ರತಿಯೊಬ್ಬರಿಗೂ ರಾಮಮಂದಿರ ಪವಿತ್ರವಾಗಿದೆ. ಆದರೆ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂದಿರ ಉದ್ಘಾಟನೆಯ ನೆಪದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ’ ಎಂದರು.

‘ಹಿಂದೆ ಪರೇಶ್ ಮೇಸ್ತ ಸಾವಿನ ಪ್ರಕರಣ ಮುಂದಿಟ್ಟು ಬಿಜೆಪಿ ಚುನಾವಣೆ ಎದುರಿಸಿತ್ತು. ಈ ಬಾರಿಯೂ ವಿಧಾನಸಭೆ ಚುನಾವಣೆಯನ್ನು ಹಿಂದುತ್ವದ ಆಧಾರದಲ್ಲಿ ಎದುರಿಸಲು ಹೋದ ಅವರಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ’ ಎಂದು ಟೀಕಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.