ಭಟ್ಕಳ: ತಾಲ್ಲೂಕಿನ ಪ್ರಸಿದ್ಧ ದೇಗುಲ ಮುರ್ಡೇಶ್ವರದಲ್ಲಿ ರಥೋತ್ಸವವು ಮಂಗಳವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿಂದ ನೆರವೇರಿತು.
ಜ.14ರಂದು ಪ್ರಾರಂಭಗೊಂಡ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಜ.21ರಂದು ಸಂಪನ್ನಗೊಳ್ಳುತ್ತವೆ. ಮಂಗಳವಾರ ಮಹಾರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಹೋಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ರಥಕಾಣಿಕೆ ಅರ್ಪಿಸಿದರು.
ಸಂಜೆ 5.30ರ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಮಹಾರಥವನ್ನು ದೇವಸ್ಥಾನದ ಕೆರೆಯ ಸುತ್ತ ಎಳೆಯಲಾಯಿತು. ರಥೋತ್ಸವದ ಸಂದರ್ಭದಲ್ಲಿ ಶಾಸಕ ಸುನೀಲ ನಾಯ್ಕ, ಮಾಜಿ ಶಾಸಕ ಮಂಕಾಳ ವೈದ್ಯ, ತಹಶೀಲ್ದಾರ್ ರವಿಚಂದ್ರ, ದೇವಸ್ಥಾನದ ಟ್ರಸ್ಟಿಗಳು ಸೇರಿದಂತೆ ವಿವಿಧ ಗಣ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.