ಕಾರವಾರ: 'ತೌಕ್ತೆ' ಚಂಡಮಾರುತದ ಅಬ್ಬರವು ಉತ್ತರ ಕನ್ನಡದ ಕರಾವಳಿಯಲ್ಲಿ ಹಲವು ಕಷ್ಟ ನಷ್ಟಗಳನ್ನು ಉಂಟುಮಾಡಿದೆ. ಪ್ರಸಿದ್ಧ ಯಾತ್ರಾ ಸ್ಥಳ ಮತ್ತು ಪ್ರವಾಸಿ ತಾಣವೂ ಆಗಿರುವ ಭಟ್ಕಳ ತಾಲ್ಲೂಕಿನ ಮುರ್ಡೇಶ್ವರದಲ್ಲಿ ಅರಬ್ಬಿ ಸಮುದ್ರದ ಅಲೆಗಳು ಹಲವು ಗೂಡಂಗಡಿಗಳನ್ನು ಬಾಧಿಸಿವೆ. ದಡದಲ್ಲಿ ನಿಲ್ಲಿಸಿದ್ದ ಗೂಡಂಗಡಿಗಳು ಅಲೆಗಳ ಹೊಡೆತದಿಂದ ನೀರು ಪಾಲಾಗದಂತೆ ತಡೆಯಲು ಅವುಗಳ ಮಾಲೀಕರು ಹರಸಾಹಸ ಪಡಬೇಕಾಯಿತು. ಅಲ್ಲೇ ಸಮೀಪದಲ್ಲಿ ಲಂಗರು ಹಾಕಲಾಗಿದ್ದ ಮೀನುಗಾರಿಕಾ ದೋಣಿಗಳೂ ಅಲೆಗಳ ಹೊಡೆತಕ್ಕೆ ಸಿಲುಕಿದ್ದವು. ಮೀನುಗಾರರು ಅವುಗಳನ್ನು ಮತ್ತಷ್ಟು ಬಿಗಿಯಾಗಿ ಲಂಗರು ಹಾಕಲು ಪರದಾಡುತ್ತಿದ್ದುದು ಕಂಡುಬಂತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.