ಕಾರವಾರ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ತಾಲ್ಲೂಕಿನ ಸದಾಶಿವಗಡದಲ್ಲಿ ಶನಿವಾರ ಮಹಿಳೆಯರು 71 ರಂಗೋಲಿಗಳನ್ನು ಬಿಡಿಸಿದರು.
ಬಿಜೆಪಿ ಗ್ರಾಮೀಣ ಘಟಕದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ, ಭಗತ್ ಸಿಂಗ್, ಭಾರತಾಂಬೆ, ಭಾರತದ ನಕ್ಷೆ, ಹಸಿರು ಭಾರತ, ಸ್ವಚ್ಛ ಭಾರತ ಮುಂತಾದ ರಂಗೋಲಿಗಳು ಗಮನ ಸೆಳೆದವು. ಕಮಲದ ಬೃಹತ್ ರಂಗೋಲಿಯಲ್ಲಿ 105 ದೀಪಗಳನ್ನು ಹಚ್ಚಿ ಸದೃಢ ಭಾರತದ ಕನಸನ್ನು ಸಾಕಾರಗೊಳಿಸುವ ಕುರಿತು ಪ್ರತಿಜ್ಞೆ ಸ್ವೀಕರಿಸಿದರು.
ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಸ್ ಗುನಗಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಪಂಡಿತ ದೀನ್ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ರಂಗೋಲಿ ಬಿಡಿಸಿದ ಎಲ್ಲ ಮಹಿಳೆಯರಿಗೂ ಪುಸ್ತಕ ವಿತರಿಸಲಾಯಿತು.
ರಾಜ್ಯ ಕಾರ್ಯಕಾರಿಣಿ ಸದಸ್ಯೆ ರೇಖಾ ಹೆಗಡೆ, ಜಿಲ್ಲಾ ಘಟಕದ ಉಪಾಧ್ಯಕ್ಷೆ ನಯನಾ ನೀಲಾವರ, ಯುವಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರಶಾಂತ ನಾಯಕ, ಗ್ರಾಮೀಣ ಪ್ರಭಾರಿ ಗಜಾನನ ಗುನಗಾ ಮಾತನಾಡಿದರು. ಉದಯ ನಾಯ್ಕ, ಮಂಜುನಾಥ ಮುದಗೇಕರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.