ADVERTISEMENT

ಸಿದ್ದಾಪುರ | ಪತ್ರಕರ್ತರಿಂದ ಪ್ರಜಾಪ್ರಭುತ್ವ ಜೀವಂತ- ತಿ.ನ. ಶ್ರೀನಿವಾಸ ಸಾಗರ

ಪತ್ರಕರ್ತ ತಿ.ನ. ಶ್ರೀನಿವಾಸ ಸಾಗರ ಅಭಿಮತ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2024, 15:19 IST
Last Updated 31 ಮಾರ್ಚ್ 2024, 15:19 IST
ಸಿದ್ದಾಪುರದ ಬಾಲಭವನದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಭಟ್ಟ ಬಕ್ಕಳ ಉದ್ಘಾಟಿಸಿದರು
ಸಿದ್ದಾಪುರದ ಬಾಲಭವನದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಭಟ್ಟ ಬಕ್ಕಳ ಉದ್ಘಾಟಿಸಿದರು   

ಸಿದ್ದಾಪುರ: ಪತ್ರಿಕೋದ್ಯಮ ಹಲವು ಸಮಸ್ಯೆಗಳ ನಡುವೆಯೂ ತಲೆ ಎತ್ತಿ ನಿಂತು ಸಮಾಜವನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ ತಿ.ನ. ಶ್ರೀನಿವಾಸ ಸಾಗರ ಹೇಳಿದರು.

ಪಟ್ಟಣದ ಬಾಲಭವನದಲ್ಲಿ ತಾಲ್ಲೂಕು ಪತ್ರಕರ್ತರ ಸಂಘವು ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ವಿಶೇಷ ಉಪನ್ಯಾಸದಲ್ಲಿ ಶನಿವಾರ ಅವರು ಮಾತನಾಡಿದರು.

‘ದೇಶದಲ್ಲಿ ಇಂದು ಶಾಸಕಾಂಗ ಮತ್ತು ಕಾರ್ಯಾಂಗ ವಿಫಲವಾಗಿವೆ. ನ್ಯಾಯಾಧೀಶರೇ ನ್ಯಾಯಾಂಗದ ಮೇಲೆ ಅನುಮಾನ ವ್ಯಕ್ತಪಡಿಸುವ ಪರಿಸ್ಥಿತಿ ಬಂದಿದೆ. ವಿರೋಧ ಪಕ್ಷವಾಗಿ, ಅನಧಿಕೃತ ಜನಪ್ರತಿನಿಧಿಯಾಗಿ ಸಮಾಜದ ಸಮಸ್ಯೆಗಳನ್ನು ಗುರುತಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ. ಆಳುವ ವರ್ಗಕ್ಕೆ ಪತ್ರಕರ್ತರ ಮೇಲೆ ಆರೋಪ ಮಾಡುವ ಯಾವುದೇ ನೈತಿಕತೆ ಇಲ್ಲ. ಪತ್ರಿಕೋದ್ಯಮ ಮತ್ತು ಪತ್ರಕರ್ತರಿಂದಾಗಿ ದೇಶದಲ್ಲಿ ಪ್ರಜಾಪ್ರಭುತ್ವ ಇನ್ನೂ ಜೀವಂತವಾಗಿದೆ’ ಎಂದು ಅವರು ಹೇಳಿದರು.

ADVERTISEMENT

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಭಟ್ಟ ಬಕ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ‘ಹಿಂದಿನ ತಲೆಮಾರಿನ ಪತ್ರಕರ್ತರ ಪ್ರಾಮಾಣಿಕತೆ ಮತ್ತು ನಿಷ್ಠೆಯನ್ನು ನೋಡಿ ಮುಂದಿನ ತಲೆಮಾರಿನ ಪತ್ರಕರ್ತರು ಅನುಸರಿಸಬೇಕು’ ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ಪಾಟೀಲ ಮುಂಡಗೋಡ ಮತ್ತು ಸಿದ್ದಾಪುರದ ಹಿರಿಯ ಸಾಹಿತಿ ಜಿ.ಜಿ. ಹೆಗಡೆ ಬಾಳಗೋಡು ಮಾತನಾಡಿದರು.

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ ಅಧ್ಯಕ್ಷತೆ ವಹಿಸಿದ್ದರು.

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಗಣೇಶ ಭಟ್ಟ ಸ್ವಾಗತಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ನಾಗರಾಜ ಭಟ್ಟ ಕೆಕ್ಕಾರ ವಂದಿಸಿದರು. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ರಮೇಶ ಹಾರ್ಸಿಮನೆ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.