ಶಿರಸಿ: ತಾಲ್ಲೂಕಿನ ಬಚಗಾಂವದಲ್ಲಿ ಅಡಿಕೆ ತೋಟಕ್ಕೆ ಬೆಂಕಿ ತಗುಲಿ ಅಪಾರ ನಷ್ಟವಾದ ಘಟನೆ ಮಂಗಳವಾರ ನಡೆದಿದೆ.
ಇಲ್ಲಿನ ಅಮರ ನೇರಲಕಟ್ಟೆ ಅವರಿಗೆ ಸೇರಿದ ಜಮೀನಿನಲ್ಲಿ ಅಗ್ನಿ ಆಕಸ್ಮಿಕ ನಡೆದಿದ್ದು, 300ಕ್ಕೂ ಹೆಚ್ಚು ಅಡಿಕೆ ಗಿಡಗಳು ಸುಟ್ಟು ಕರಕಲಾಗಿವೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಗಿಡಗಳಿಗೆ ನೀರು ಪೂರೈಸುವ ಸಂಬಂಧ ಜೋಡಿಸಿದ್ದ ಪೈಪ್ ಲೈನ್ಗಳು ಹಾನಿಯಾಗಿವೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಂದಾಯ ಇಲಾಖೆ ಸಿಬ್ಬಂದಿ ಸ್ಥಳ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.