ADVERTISEMENT

ಆರ್ಥಿಕ ಸಂಸ್ಥೆ ರಕ್ಷಣೆ ಸದಸ್ಯರ ಜವಾಬ್ದಾರಿ: ಹೆಬ್ಬಾರ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 13:49 IST
Last Updated 9 ಜುಲೈ 2024, 13:49 IST
ಶಿರಸಿ ತಾಲ್ಲೂಕಿನ ದಾಸನಕೊಪ್ಪ ಕಾಳಂಗಿ ಸೇವಾ ಸಹಕಾರಿ ಸಂಘದ ಕಟ್ಟಡದಲ್ಲಿ ಆರಂಭವಾದ ಕೆಡಿಸಿಸಿ ಬ್ಯಾಂಕ್ ಶಾಖೆಯನ್ನು ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿದರು. ಎಲ್.ಟಿ.ಪಾಟೀಲ್, ಮೋಹನದಾಸ ನಾಯಕ, ಶ್ರೀಕಾಂತ ಭಟ್ ಇತರರಿದ್ದರು.  
ಶಿರಸಿ ತಾಲ್ಲೂಕಿನ ದಾಸನಕೊಪ್ಪ ಕಾಳಂಗಿ ಸೇವಾ ಸಹಕಾರಿ ಸಂಘದ ಕಟ್ಟಡದಲ್ಲಿ ಆರಂಭವಾದ ಕೆಡಿಸಿಸಿ ಬ್ಯಾಂಕ್ ಶಾಖೆಯನ್ನು ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿದರು. ಎಲ್.ಟಿ.ಪಾಟೀಲ್, ಮೋಹನದಾಸ ನಾಯಕ, ಶ್ರೀಕಾಂತ ಭಟ್ ಇತರರಿದ್ದರು.     

ಶಿರಸಿ: ಕಷ್ಟದಲ್ಲಿರುವ ಜನರ ಕೈಹಿಡಿದು ಕಾಪಾಡುವ ಆರ್ಥಿಕ ಸಂಸ್ಥೆಗೆ ಮೋಸ ಮಾಡಿದರೆ ನಿಮಗೆ ನೀವು ಮೋಸ ಮಾಡಿಕೊಂಡತಾಗುತ್ತದೆ. ಹಾಗಾಗಿ ಬ್ಯಾಂಕ್‍ಗಳನ್ನು ಸ್ವಂತ ಆಸ್ತಿಯಂತೆ ರಕ್ಷಿಸಿಕೊಳ್ಳುವ ಜವಾಬ್ದಾರಿ ಸದಸ್ಯರದ್ದು ಎಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ತಾಲ್ಲೂಕಿನ ದಾಸನಕೊಪ್ಪದ ಸಂತೆ ಮಾರುಕಟ್ಟೆ ಬಳಿ ಕಾಳಂಗಿ ಸೇವಾ ಸಹಕಾರಿ ಸಂಘದ ಕಟ್ಟಡದಲ್ಲಿ ಮಂಗಳವಾರ ನೂತನವಾಗಿ ಆರಂಭವಾದ ಕೆಡಿಸಿಸಿ ಬ್ಯಾಂಕ್ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು. 

ದಾಸನಕೊಪ್ಪ ಭಾಗದ ರೈತರ ಅನುಕೂಲಕ್ಕಾಗಿ ನೂತನ 57ನೆಯ ಶಾಖೆಯನ್ನು ಆರಂಭಿಸಿದ್ದೇವೆ. ಜುಲೈ ತಿಂಗಳ ಒಳಗಾಗಿ 74 ಶಾಖೆಯನ್ನು ಆರಂಭಿಸಬೇಕಾಗಿದೆ. ಕರ್ನಾಟಕ ರಾಜ್ಯದಲ್ಲಿ ಒಂದೇ ಜಿಲ್ಲೆಯಲ್ಲಿ ಇಷ್ಟೊಂದು ಶಾಖೆಯನ್ನು ಹೊಂದಿದ ಏಕೈಕ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಕೆಡಿಸಿಸಿ ಬ್ಯಾಂಕ್ ಪಾತ್ರವಾಗಿದೆ ಎಂದರು.

ADVERTISEMENT

ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ರೈತರ ಬ್ಯಾಂಕ್ ಆಗಿದ್ದು, ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ರೈತರು ಬ್ಯಾಂಕ್‌ನಿಂದ ಸಾಲ ಪಡೆದು ಕಾಲಕಾಲಕ್ಕೆ ಮರುಪಾವತಿ ಮಾಡಬೇಕು. ಮೋಸ ಮಾಡಬಾರದು ಎಂದು ಮನವಿ ಮಾಡಿದರು.

ಕೆಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ ನಾಯಕ, ನಿರ್ದೇಶಕರಾದ ಎಲ್.ಟಿ.ಪಾಟೀಲ, ರಾಮಕೃಷ್ಣ ಹೆಗಡೆ ಕಡವೆ, ಪ್ರಮೋದ ಧವಳೆ, ಕಾಳಂಗಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜಶೇಖರ ಗೌಡರ, ಕೆಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಶ್ರೀಕಾಂತ ಭಟ್, ಪ್ರಮುಖರು ಇದ್ದರು.

ದ್ಯಾಮಣ್ಣ ದೊಡ್ಮನಿ ಪ್ರಾಸ್ತಾವಿಕ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.