ADVERTISEMENT

ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಸಂಪುಟ ಸಭೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2018, 17:17 IST
Last Updated 5 ಡಿಸೆಂಬರ್ 2018, 17:17 IST
ಕಾರವಾರ ಸಮೀಪದ ಸಾವರಪೈಯಲ್ಲಿ ನಿರ್ಮಾಣವಾಗಲಿರುವ ಕೆಎಸ್‌ಸಿಎ ಕ್ರಿಕೆಟ್ ಸ್ಟೇಡಿಯಂಗೆ ಮಂಜೂರಾಗಿರುವ ಪ್ರದೇಶ
ಕಾರವಾರ ಸಮೀಪದ ಸಾವರಪೈಯಲ್ಲಿ ನಿರ್ಮಾಣವಾಗಲಿರುವ ಕೆಎಸ್‌ಸಿಎ ಕ್ರಿಕೆಟ್ ಸ್ಟೇಡಿಯಂಗೆ ಮಂಜೂರಾಗಿರುವ ಪ್ರದೇಶ   

ಕಾರವಾರ: ತಾಲ್ಲೂಕಿನ ಚಿತ್ತಾಕುಲಾ ಗ್ರಾಮದ ಸಾವರಪೈ ಪ್ರದೇಶದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (ಕೆಎಸ್‌ಸಿಎ) ನಿರ್ಮಿಸಲು ಉದ್ದೇಶಿಸಿರುವ ಕ್ರಿಕೆಟ್ ಸ್ಟೇಡಿಯಂಗೆ ರಾಜ್ಯ ಸಚಿವ ಸಂಪುಟ ಬುಧವಾರ ಅಂತಿಮ ಒಪ್ಪಿಗೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಮುಖಂಡ ಸತೀಶ್ ಸೈಲ್, ‘11 ಎಕರೆ ಸರ್ಕಾರಿ ಜಾಗದಲ್ಲಿಅಂತರರಾಷ್ಟ್ರೀಯ ಗುಣಮಟ್ಟದ ಸ್ಟೇಡಿಯಂ ನಿರ್ಮಾಣವಾಗಲಿದೆ. ಕೆಎಸ್‌ಸಿಎಯನಿಯೋಗವು ಈಗಾಗಲೇ ಸ್ಥಳ ಪರಿಶೀಲನೆ ಮಾಡಿದೆ. ಕಂದಾಯ ಇಲಾಖೆಯಿಂದ ಜಾಗವನ್ನು ಕೆಎಸ್‌ಸಿಎಗೆ ವಾರ್ಷಿಕ ಬಾಡಿಗೆಯ ಮೇಲೆ ನೀಡಲಾಗುವುದು.ಈ ಬಗ್ಗೆ ಸೂಕ್ತ ಕರಾರು ಪತ್ರವನ್ನು ತಯಾರಿಸಿ ಅನುಮೋದನೆಗಾಗಿ ರಾಜ್ಯ ಸರಕಾರಕ್ಕೆ ಕಳುಹಿಸಲಾಗಿತ್ತು’ ಎಂದು ತಿಳಿಸಿದ್ದಾರೆ.

‘ಸ್ಟೇಡಿಯಂ ನಿರ್ಮಿಸಲು ಹಸಿರು ನಿಶಾನೆ ದೊರಕುವ ಮೂಲಕ ನನ್ನ ಹಾಗೂ ಕ್ಷೇತ್ರದ ಯುವಕರ ಕನಸು ನನಸಾಗಿದೆ’ ಎಂದುಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.