ಹಳಿಯಾಳ: ಮಾದಕ ವಸ್ತುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಅಂಗವಾಗಿ ಇಲ್ಲಿಯ ಹವಗಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಎಸ್‌ಐ ವಿನೋದ ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಪ್ರಾಚಾರ್ಯರ ಅನುಮತಿಯ ಮೇರೆಗೆ ವಿದ್ಯಾರ್ಥಿಗಳ ಬ್ಯಾಗ್‌ಗಳನ್ನು ತಪಾಸಣೆ ಮಾಡಿದರು.
ಶಾಲಾ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ದುಚ್ಚಟಗಳಿಗೆ ಬಲಿಯಾಗಬಾರದು ಎಂದು ಪಿಎಸ್‌ಐ ವಿನೋದ ಎಸ್.ಕೆ. ಸಲಹೆ ನೀಡಿದರು. ಗಾಂಜಾ ಮತ್ತಿತರ ಮಾದಕ ಪದಾರ್ಥಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಸಾರಿಗೆ ನಿಯಮ ಮತ್ತಿತರ ಕಾನೂನುಗಳ ಕುರಿತು ವಿವರಿಸಿದರು. ಪ್ರಾಚಾರ್ಯ ಲಮಾಣಿ ಹಾಗೂ ಉಪನ್ಯಾಸಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.