ಕಾರವಾರ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಠಾಣೆ ಪೊಲೀಸರು ಭಾನುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಹೇಳಿಕೆ ನೀಡುವ ಜತೆಗೆ ಸಾಮಾಜಿಕ ಅಶಾಂತಿಗೆ ಕಾರಣವಾಗುವ ಮಾತುಗಳನ್ನಾಡಿರುವುದರಿಂದ ಸೆಕ್ಷನ್ 153ಎ, 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ತಿಳಿಸಿದ್ದಾರೆ.
ಶನಿವಾರ ಕುಮಟಾದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅವರು, ‘ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬ್ರಿ ಮಸೀದಿ ಮಾದರಿಯಲ್ಲಿ ಕೆಡವಬೇಕು. ಹಿಂದೂಗಳು ತಮಗಾದ ಅಪಮಾನಕ್ಕೆ ಸೇಡು ತೀರಿಸಿಕೊಳ್ಳುವವರೆಗೆ ಸುಮ್ಮನಿರಬಾರದು’ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.