ಹೊನ್ನಾವರ: ಭಟ್ಕಳ ಕಡೆಯಿಂದ ಪಟ್ಟಣದ ಶರಾವತಿ ವೃತ್ತದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಗುತ್ತಿದ್ದ ಎಲ್.ಪಿ.ಜಿ.ಟ್ಯಾಂಕರ್ ಮಂಗಳವಾರ ಮಧ್ಯಾಹ್ನ ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕಾಯಿತು.
ಎದುರಿನ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಯಿತು ಎನ್ನಲಾಗಿದೆ.
ಟ್ಯಾಂಕರ್ ಚಾಲಕ ಗಾಯಗೊಂಡಿದ್ದಾರೆ. ಟ್ಯಾಂಕರ್ನಿಂದ ಅನಿಲ ಸೋರಿಕೆಯಾದರೆ ಉಂಟಾಗಬಹುದಾದ ಅಪಾಯ ಎದುರಿಸಲು ಮುಂಜಾಗೃತಾ ಕ್ರಮವಾಗಿ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದಿತ್ತು. ಟ್ಯಾಂಕರ್ ತೆರವುಗೊಳಿಸುವಾಗ ಈ ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಕಲ್ಪಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.