ಕಾರವಾರ: ಯಲ್ಲಾಪುರ ತಾಲ್ಲೂಕಿನ ಶಿವಪುರ ತೂಗುಸೇತುವೆಯ ಮೇಲೆ ಕಾರು ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ, ಜೊಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು ಚಾಲಕ, ಜೊಯಿಡಾ ತಾಲ್ಲೂಕಿನ ಉಳವಿ ನಿವಾಸಿ ಮುಜಾಹಿದ್ ಆಜಾದ್ ಸೈಯದ್ (26) ಆರೋಪಿ.
ತೂಗು ಸೇತುವೆಯಲ್ಲಿ ಅ.31ರಂದು ಕಾರು ಚಲಾಯಿಸಿದ ಫೋಟೊಗಳು ಮತ್ತು ವಿಡಿಯೊಗಳು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ಬಳಿಕ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು. ಈ ಬಗ್ಗೆ ಉಳವಿ
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ ಅರ್ಜುನ ಮೊಕಾಶಿ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.