ಕಾರವಾರ:ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರ ಸಾವಿನ ಬಗ್ಗೆ ಸರ್ಕಾರ ಕೈಗೊಳ್ಳುವ ತನಿಖೆಯಿಂದ ಸತ್ಯಾಂಶ ಹೊರಬರುವ ವಿಶ್ವಾಸವಿದೆ ಎಂದು ವಿಧಾನಪರಿಷತ್ತಿನವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶ್ರೀಗಳ ಪೂರ್ವಾಶ್ರಮದ ತಮ್ಮ ವಿಷಪ್ರಾಶನದ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ.ಆ ಭಾಗದಶಾಸಕನಾಗಿ, ವಿಧಾನಪರಿಷತ್ತಿನವಿರೋಧ ಪಕ್ಷದ ನಾಯಕನಾಗಿ ಸೂಕ್ತ ಮತ್ತು ಪಾರದರ್ಶಕ ತನಿಖೆ ಕೈಗೊಳ್ಳುವಂತೆ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದೇನೆ. ಶ್ರೀಗಳ ಸಾವಿಗೆ ಇನ್ನೆರಡು, ಮೂರು ದಿನಗಳಲ್ಲಿ ಕಾರಣ ತಿಳಿದುಬರಬಹುದು’ ಎಂದು ಹೇಳಿದರು.
‘ಶಿರೂರು ಶ್ರೀಗಳ ಸಾವಿನ ಬಗ್ಗೆ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ನೀಡುತ್ತಿರುವ ಹೇಳಿಕೆಗಳು ಗೊಂದಲ ಮೂಡಿಸುತ್ತಿವೆಯಲ್ಲ’ ಎಂದು ಪತ್ರಕರ್ತರು ಕೇಳಿದಾಗ, ‘ಅವರು ಪರಮಪೂಜ್ಯರು. ಅಲ್ಲಿನ ಮಠಗಳ ಆಂತರಿಕ ವಿಚಾರಗಳ ಬಗ್ಗೆ ನನಗೆ ಗೊತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.
ಇದನ್ನೂಓದಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.