ADVERTISEMENT

ಗಾಂಜಾ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆ ಆರೋಪ: ಇಬ್ಬರು ಮಹಿಳಾ ಟೆಕ್ಕಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2024, 5:49 IST
Last Updated 18 ಫೆಬ್ರುವರಿ 2024, 5:49 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಗೋಕರ್ಣ: ಗಾಂಜಾ ಮತ್ತಿನಲ್ಲಿ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ್ದಲ್ಲದೆ, ತಡೆಯಲು ಬಂದ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ಮಹಿಳಾ ಟೆಕ್ಕಿಗಳನ್ನು ಗೋಕರ್ಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶನಿವಾರ ರಾತ್ರಿ ಘಟನೆ ನಡೆದಿದ್ದು, ಮೂವರು ಮಹಿಳಾ ಪೊಲೀಸರು ಹಲ್ಲೆಗೊಳಗಾಗಿದ್ದಾರೆ.

ADVERTISEMENT

ಬಿಹಾರ ಮೂಲದ ಪಲ್ಲವಿ ಪ್ರಿಯಾ ಸುನಿಲಕುಮಾರ್ (29) ಮತ್ತು ಜಾರ್ಖಂಡ್ ಮೂಲದ ಪ್ರಿಯಾರಾಯ್ ಧರ್ಮೇಂದ್ರಕುಮಾರ್ (26) ಹಲ್ಲೆ ನಡೆಸಿದ ಆರೋಪಿಗಳು. ಇಬ್ಬರೂ ಬೆಂಗಳೂರಿನಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಸಾಫ್ಟವೇರ್ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

'ಪ್ರವಾಸದ ನಿಮಿತ್ತ ಸ್ನೇಹಿತರೊಂದಿಗೆ ಗೋಕರ್ಣಕ್ಕೆ ಬಂದಿದ್ದ ಯುವತಿಯರು ಅಡ್ಡಾದಿಡ್ಡಿ ವಾಹನ ಚಲಾಯಿಸುತ್ತಿದ್ದರು. ಅವರನ್ನು ತಡೆಯಲು ಹೋದ ಮಹಿಳಾ ಸಿಬ್ಬಂದಿಗೆ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿದ್ದು ದೃಢಪಟ್ಟಿದೆ. ಮಾದಕ ವಸ್ತು ಸೇವನೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.