ADVERTISEMENT

ಉತ್ತರ ಕನ್ನಡ | ಇಳಿಕೆಯಾದ ಮಳೆ: 150 ಸಂತ್ರಸ್ತರಿಗೆ ಆಶ್ರಯ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 15:34 IST
Last Updated 9 ಜುಲೈ 2024, 15:34 IST
ಮಳೆ
ಮಳೆ   

ಕಾರವಾರ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕವಾಗಿದ್ದ ಮಳೆಯ ಪ್ರಮಾಣ ಮಂಗಳವಾರ ಇಳಿಮುಖವಾಗಿದ್ದು, ಹೊನ್ನಾವರ ತಾಲ್ಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ 150 ಮಂದಿ ಆಶ್ರಯ ಪಡೆದಿದ್ದಾರೆ.

ಸತತ ಮಳೆಯಿಂದಾಗಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದ ಕಾಳಿ, ಗಂಗಾವಳಿ, ಅಘನಾಶಿನಿ, ಶರಾವತಿ ನದಿಗಳಲ್ಲಿ ನೀರಿನ ಮಟ್ಟ ಇಳಿಕೆಯಾಯಿತು. ಸೂಪಾ, ಕದ್ರಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ಮಲೆ ಇಳಿಕೆಯಾಗಿದ್ದರಿಂದ ಜಲಾಶಯಗಳ ಒಳ ಹರಿವಿನ ಪ್ರಮಾಣದಲ್ಲಿಯೂ ಇಳಿಕೆಯಾಗಿತ್ತು. ಹೀಗಾಗಿ ಕದ್ರಾ ಜಲಾಶಯದಿಂದ ನೀರು ಹೊರ ಬಿಡುವ ಪ್ರಮಾಣ ಇಳಿಕೆಯಾಯಿತು.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ತೀವ್ರ ಹಾನಿ ಹಾಗೂ 10 ಮನೆಗಳಿಗೆ ಭಾಗಶಃ ಹಾನಿಯಾದವು. ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಭೂ ಕುಸಿತದ ಘಟನೆಗಳು ನಡೆದವು. ಆದರೆ ಹಾನಿ ಸಂಭವಿಸಲಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.