ADVERTISEMENT

ವಸತಿ ಶಾಲೆ ವಿದ್ಯಾರ್ಥಿಗಳು ರಾಷ್ಟ್ರ, ರಾಜ್ಯಮಟ್ಟಕ್ಕೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 14:24 IST
Last Updated 14 ಅಕ್ಟೋಬರ್ 2024, 14:24 IST
ಸಚಿನ್ ಗೌಡ
ಸಚಿನ್ ಗೌಡ   

ಕಾರವಾರ: ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಯೋಜಿಸಿದ್ದ ಯೋಗಾಸನ ಸ್ಪರ್ಧೆ ಮತ್ತು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಕುಮಟಾ ತಾಲ್ಲೂಕು ಹೆಗಡೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗದಲ್ಲಿ ಆಯೋಜಿಸಲಾದ ಪ್ರೌಢಶಾಲೆಗಳ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಸಚಿನ್ ಶಿವಾನಂದ ಗೌಡ ಮೊದಲ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. 7ನೇ ತರಗತಿ ವಿದ್ಯಾರ್ಥಿನಿ ಸಿಂಧು ಹರಿಶ್ಚಂದ್ರ ನಾಯ್ಕ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಜಿಲ್ಲಾಮಟ್ಟದಲ್ಲಿ 100 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಸವಿತಾ ಗೌಡ ತರಬೇತಿ ನೀಡಿದ್ದರು.

ಸಿಂಧು ನಾಯ್ಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT