ಜೊಯಿಡಾ: ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಯುವ ಮುಖಂಡ ವಿನಯ ದೇಸಾಯಿ ಅವರನ್ನು ನೇಮಕಗೊಳಿಸಲಾಗಿದೆ.
ಸೋಮವಾರ ಬಾಮಣೆಯಲ್ಲಿ ಡಿಗ್ಗಿ ಭಾಗಕ್ಕೆ ನೂತನ ಬಸ್ ಸೇವೆ ಪ್ರಾರಂಭದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ನೂತನ ಅಧ್ಯಕ್ಷರ ಆಯ್ಕೆ ಬಗ್ಗೆ ಮಾಹಿತಿ ನೀಡಿದರು.
ಕಳೆದ 17 ವರ್ಷಗಳಿಂದ ಸದಾನಂದ ದಬಗಾರ್ ಜೊಯಿಡಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು.
ಹಳಿಯಾಳ-ಜೊಯಿಡಾ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಮರಾಠಾ ಸಮಾಜಕ್ಕೆ ತಾಲ್ಲೂಕು ಅಧ್ಯಕ್ಷ ಸ್ಥಾನ ನೀಡಿದ್ದು ರಾಜಕೀಯ ವಲಯದಲ್ಲಿ ಹೊಸ ಲೆಕ್ಕಾಚಾರಗಳು ಪ್ರಾರಂಭಗೊಂಡಿದೆ.
'ಪಕ್ಷದ ಸಂಘಟನೆ ಚುರುಕು ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ ವಿವಿಧ ತಾಲ್ಲೂಕುಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಲಾಗಿದೆ. ಮುಂದಿನ ವಾರವೇ ಪದಗ್ರಹಣ ಸಮಾರಂಭ ನಡೆಯಲಿದೆ' ಎಂದು ಶಾಸಕ ಆರ್ ವಿ ದೇಶಪಾಂಡೆ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.