ADVERTISEMENT

ಅಂಕೋಲಾ | ಕಾರು ಡಿಕ್ಕಿ: ವಾಕಿಂಗ್‌ ಮಾಡುತ್ತಿದ್ದ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2023, 13:33 IST
Last Updated 26 ಡಿಸೆಂಬರ್ 2023, 13:33 IST
<div class="paragraphs"><p>ಸಾವು –ಪ್ರಾತಿನಿಧಿಕ ಚಿತ್ರ</p></div>

ಸಾವು –ಪ್ರಾತಿನಿಧಿಕ ಚಿತ್ರ

   

ಅಂಕೋಲಾ: ತಾಲ್ಲೂಕಿನ ಅವರ್ಸಾ ಗ್ರಾಮದಲ್ಲಿ ಕಾರು ಡಿಕ್ಕಿ ಹೊಡೆದು ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟರುವ ಘಟನೆ ಮಂಗಳವಾರ ನಡೆದಿದೆ.

ತಾಲ್ಲೂಕಿನ ಹೆಗ್ಗರಣಿ ಗ್ರಾಮದ ದೀಪಾ ಅಶೋಕ ನಾಯ್ಕ (55) ಮೃತ ಮಹಿಳೆ. ‘ಅವರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಗೋವಾದಿಂದ ಅಂಕೋಲಾ ಮಾರ್ಗವಾಗಿ ಅತಿ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದೀಪಾ ಅವರ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ’ ಎಂದು ಸ್ಥಳೀಯರು ತಿಳಿಸಿದ್ದಾರೆ.

ADVERTISEMENT

‘ಗೋವಾದಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದವರಿಗೆ ಸೇರಿದ ಕಾರಿನಿಂದ ಅಪಘಾತವಾಗಿದೆ’ ಎಂದು ಅಂಕೋಲಾ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.