ADVERTISEMENT

ವಿಶ್ವದಾಖಲೆ ಪಟ್ಟಿಗೆ ಯಕ್ಷನೃತ್ಯ ಕಲಾವಿದೆ ತುಳಸಿ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 15:47 IST
Last Updated 2 ಜುಲೈ 2024, 15:47 IST
ತುಳಸಿ ಹೆಗಡೆ
ತುಳಸಿ ಹೆಗಡೆ   

ಶಿರಸಿ: ಕಿರಿಯ ವಯಸ್ಸಿನಿಂದ ಯಕ್ಷನೃತ್ಯದ ಮೂಲಕ ವಿಶ್ವಶಾಂತಿಗೆ ಕೊಡುಗೆ ನೀಡುತ್ತಿರುವ ಬಾಲ ಕಲಾವಿದೆ ಶಿರಸಿಯ ತುಳಸಿ ಹೆಗಡೆ ಅವರ ಹೆಸರು ಲಂಡನ್‌ನ ಪ್ರತಿಷ್ಠಿತ ವರ್ಲ್ಡ್ ರೆಕಾರ್ಡ್ ಸಂಸ್ಥೆ ವಿಶ್ವದಾಖಲೆ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ.

ಯಕ್ಷಗಾನ ಕಲಾ‌ ಪ್ರಕಾರದ ಮೂಲಕ ವಿಶ್ವಶಾಂತಿಗೆ ಈವರೆಗೆ 9 ಸರಣಿ ನೃತ್ಯ ಪ್ರದರ್ಶಿಸುತ್ತಿರುವುದನ್ನು ಗಮನಿಸಿ ಮಕ್ಕಳ ವಿಭಾಗದ ತನ್ನ ದಾಖಲಾತಿಯಲ್ಲಿ ಸೇರಿಸಿಕೊಂಡಿದೆ. ಶಿರಸಿ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ತುಳಸಿ ಹೆಗಡೆ ತನ್ನ ಮೂರನೇ ವರ್ಷದಿಂದಲೇ ಯಕ್ಷಗಾನ ಕ್ಷೇತ್ರಕ್ಕೆ ಬಾಲ ಹೆಜ್ಜೆ ಇಟ್ಟವಳು. ಐದೂವರೆ ವರ್ಷದಿಂದ ವಿಶ್ವ ಶಾಂತಿ ರೂಪಕಗಳನ್ನು  ಪ್ರಸ್ತುತಗೊಳಿಸುತ್ತಿದ್ದಾಳೆ.

ಈಗಾಗಲೇ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿಯೂ ದಾಖಲಾಗಿದ್ದು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೀಡುವ ರಾಜ್ಯ ಮಟ್ಟದ ಬಾಲ ಗೌರವ ಪ್ರಶಸ್ತಿ ಸೇರಿ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅವಳಿಗೆ ಸಂದಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.