ADVERTISEMENT

ಮಾನಸಿಕ, ದೈಹಿಕ ಆರೋಗ್ಯಕ್ಕೆ ಯೋಗ ಸಹಕಾರಿ: ಗಣಪತಿ ಭಟ್ಟ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 13:48 IST
Last Updated 22 ಜೂನ್ 2024, 13:48 IST
ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ  ಹೊನ್ನಾವರ ತಾಲ್ಲೂಕಿನ ಕವಲಕ್ಕಿಯ ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಕೃತ ವಿದ್ವಾಂಸ ಗಣಪತಿ ಭಟ್ಟ ಮಾತನಾಡಿದರು.
ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ  ಹೊನ್ನಾವರ ತಾಲ್ಲೂಕಿನ ಕವಲಕ್ಕಿಯ ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಕೃತ ವಿದ್ವಾಂಸ ಗಣಪತಿ ಭಟ್ಟ ಮಾತನಾಡಿದರು.   

ಹೊನ್ನಾವರ: ಯೋಗದಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸುಧಾರಣೆ ಸಾಧ್ಯ ಎಂದು ಸಂಸ್ಕೃತ ವಿದ್ವಾಂಸ ಗಣಪತಿ ಭಟ್ಟ ಉಪ್ಪಿನಪಟ್ಟಣ ಅಭಿಪ್ರಾಯಪಟ್ಟರು.

ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕವಲಕ್ಕಿಯ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ನಿವೃತ್ತ ಪ್ರಧಾನ ವ್ಯವಸ್ಥಾಪಕ ನಾರಾಯಣ ಯಾಜಿ, ಯೋಗದಿಂದ ಮನಸ್ಸನ್ನು ನಿಯಂತ್ರಣದಲ್ಲಿರಿಸಿಕೊಳ್ಳಬಹುದು ಎಂದು ಹೇಳಿದರು.

ADVERTISEMENT

ನಿವೃತ್ತ ಪ್ರಾಚಾರ್ಯ ವಿ.ಜಿ. ಹೆಗಡೆ ಗುಡ್ಗೆ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಎಂ.ಎಸ್. ಹೆಗಡೆ ಗುಣವಂತೆ ಸ್ವಾಗತಿಸಿದರು. ಮನೋಜ ಭಟ್ಟ ಪ್ರಾರ್ಥನಾ ಗೀತೆ ಹಾಡಿದರು. ಸಂಗೀತಾ ಯಾಜಿ, ಸೌಮ್ಯ ಹೆಗಡೆ ನಿರೂಪಿಸಿದರು. ಮುಖ್ಯ ಶಿಕ್ಷಕಿ ವೈಲೆಟ್ ಫರ್ನಾಂಡಿಸ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.