ADVERTISEMENT

26 ಸ್ಥಾನಗಳಿಗೆ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 14:56 IST
Last Updated 22 ಅಕ್ಟೋಬರ್ 2024, 14:56 IST

ಹೂವಿನಹಡಗಲಿ: ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕದ 34 ನಿರ್ದೇಶಕ ಸ್ಥಾನಗಳ ಪೈಕಿ, 26 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, 8 ಸ್ಥಾನಗಳಿಗೆ ಅ. 28 ರಂದು ಚುನಾವಣೆ ನಡೆಯಲಿದೆ.

ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಮಂಗಳವಾರ ಕೆಲವರು ಉಮೇದುವಾರಿಕೆ ಹಿಂಪಡೆದಿದ್ದರಿಂದ ವಿವಿಧ ಇಲಾಖೆಗಳ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾದರು.

ಪ್ರಾಥಮಿಕ ಶಾಲಾ ವಿಭಾಗದಿಂದ ಮೂರು, ಪ್ರೌಢಶಾಲೆ ವಿಭಾಗದಿಂದ ಒಂದು, ಆರೋಗ್ಯ ಇಲಾಖೆಯಿಂದ ಎರಡು, ಐಟಿಐ ಕಾಲೇಜು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಡಿಪ್ಲೊಮಾ ಕಾಲೇಜಿನಿಂದ ತಲಾ ಒಂದು ಸ್ಥಾನ ಸೇರಿದಂತೆ 8 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಚುನಾವಣಾಧಿಕಾರಿ ಎಂ.ಪಿ.ಎಂ. ಪಕ್ಕೀರಗೌಡ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.