ADVERTISEMENT

ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ಶೇ 78ರಷ್ಟು ವಿದ್ಯಾರ್ಥಿಗಳು ಹಾಜರು

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 9:47 IST
Last Updated 27 ಜುಲೈ 2021, 9:47 IST
ಹೊಸಪೇಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ  ಪರೀಕ್ಷಾ ಕೇಂದ್ರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ  ಭೇಟಿ ನೀಡಿ ಪರಿಶೀಲಿಸಿದರು
ಹೊಸಪೇಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ  ಪರೀಕ್ಷಾ ಕೇಂದ್ರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ  ಭೇಟಿ ನೀಡಿ ಪರಿಶೀಲಿಸಿದರು   

ಹೊಸಪೇಟೆ(ವಿಜಯನಗರ): ಆರನೇ ತರಗತಿಗೆ ಆದರ್ಶ ವಿದ್ಯಾಲಯದ ಪ್ರವೇಶ ಪರೀಕ್ಷೆ ಮಂಗಳವಾರ ನಡೆದಿದ್ದು, ಶೇ. 78ರಷ್ಟು ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು.

ನಗರದ ಎಂಟು ಶಾಲೆಗಳ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಸಲಾಯಿತು. ವಿದ್ಯಾರ್ಥಿಗಳು ಪಾಲಕರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಬಂದು, ನಿಗದಿತ ಕೊಠಡಿಯೊಳಗೆ ತೆರಳಿದರು. ಇದಕ್ಕೂ ಮುನ್ನ ಎಲ್ಲ ವಿದ್ಯಾರ್ಥಿಗಳ ಥರ್ಮಲ್‌ ಸ್ಕ್ರಿನಿಂಗ್‌ ನಡೆಸಿ, ನಡೆಸಿ ಮಾಸ್ಕ್ ವಿತರಿಸಿ ಪರೀಕ್ಷಾ ಕೇಂದ್ರದ ಒಳಗೆ ಕಳುಹಿಸಿಕೊಟ್ಟರು.

‘ಪ್ರವೇಶ ಪರೀಕ್ಷೆಗೆ ಒಟ್ಟು 952 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಸಿದ್ದರು. ಈ ಪೈಕಿ 386 ವಿದ್ಯಾರ್ಥಿ, 361 ವಿದ್ಯಾರ್ಥಿನಿಯರು ಸೇರಿ 747 ಮಂದಿ ಪರೀಕ್ಷೆಗೆ ಹಾಜರಿಗಿದ್ದರು. 205 ವಿದ್ಯಾರ್ಥಿಗಳು ಗೈರಾಗಿದ್ದರು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸುನಂದಾ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.