ADVERTISEMENT

ಹೂವಿನಹಡಗಲಿ: ಆಂಜನೇಯಸ್ವಾಮಿ ರಥೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2023, 15:26 IST
Last Updated 31 ಡಿಸೆಂಬರ್ 2023, 15:26 IST
ಹೂವಿನಹಡಗಲಿ ತಾಲ್ಲೂಕು ಮದಲಗಟ್ಟಿ ಸುಕ್ಷೇತ್ರದಲ್ಲಿ ಆಂಜನೇಯಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು
ಹೂವಿನಹಡಗಲಿ ತಾಲ್ಲೂಕು ಮದಲಗಟ್ಟಿ ಸುಕ್ಷೇತ್ರದಲ್ಲಿ ಆಂಜನೇಯಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು   

ಹೂವಿನಹಡಗಲಿ: ತಾಲ್ಲೂಕಿನ ಮದಲಗಟ್ಟಿ ಸುಕ್ಷೇತ್ರದಲ್ಲಿ ಆಂಜನೇಯ ಸ್ವಾಮಿಯ ರಥೋತ್ಸವ ಭಾನುವಾರ ಸಂಜೆ ವಿಜೃಂಭಣೆಯಿಂದ ಜರುಗಿತು.

ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ‘ವೆಂಕಟರಮಣ ಗೋವಿಂದ’ ಎಂಬ ಭಕ್ತರ ಜಯಘೋಷ, ಹರ್ಷೋದ್ಗಾರದ ನಡುವೆ ರಥೋತ್ಸವ ಪ್ರಾರಂಭವಾಯಿತು. ರಥ ಮುಂದೆ ಸಾಗುತ್ತಿದ್ದಂತೆ ಭಕ್ತರು ಬಾಳೆಹಣ್ಣು, ಎಸೆದು ಭಕ್ತಿ ಸಮರ್ಪಿಸಿದರು. ಇದಕ್ಕೂ ಮುನ್ನ ನಡೆದ ನಿಶಾನೆ ಹರಾಜಿನಲ್ಲಿ ನಾಗರಹಳ್ಳಿ ಚಂದ್ರಶೇಖರ್ ₹1,86,101ಕ್ಕೆ ಪಟಾಕ್ಷಿ ಪಡೆದರು.

ಹೂವಿನಹಡಗಲಿ ತಾಲ್ಲೂಕು ಮದಲಗಟ್ಟಿ ಸುಕ್ಷೇತ್ರದಲ್ಲಿ ಆಂಜನೇಯಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು

ಹೂವಿನಹಡಗಲಿ, ಮುಂಡರಗಿ ತಾಲ್ಲೂಕುಗಳ ಅಪಾರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು. ರಥೋತ್ಸವ ಅಂಗವಾಗಿ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ, ಮನ್ಯಸೂಕ್ತ ಹೋಮ ಜರುಗಿತು. ಶ್ರೀಕಾಂತ ಆಚಾರ್ ನೇತೃತ್ವದಲ್ಲಿ ವಾಯುಸ್ತುತಿ ಪುನಃಶ್ಚರಣ, ಅಷ್ಟೋತ್ತರ ನೆರವೇರಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.