ಹೊಸಪೇಟೆ (ವಿಜಯನಗರ):'ಗೋಹತ್ಯೆ ನಿಷೇಧ ಕಾಯ್ದೆ ತರುವುದಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಯಾವುದೇ ಒತ್ತಡ ಇರಲಿಲ್ಲ’ ಎಂದುಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆಪ್ರತಿಕ್ರಿಯಿಸಿದರು.
ಮಂಗಳವಾರ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಗೋಹತ್ಯೆ ನಿಷೇಧಿಸಬೇಕು ಎನ್ನುವುದು ಬಹುವರ್ಷಗಳ ಬೇಡಿಕೆಯಾಗಿತ್ತು. ಅದಕ್ಕೆ ನಮ್ಮ ಸರ್ಕಾರ ಸ್ಪಂದಿಸಿ, ಕಠಿಣ ಕಾನೂನು ಜಾರಿಗೆ ತಂದಿದೆ. ಕಸಾಯಿಖಾನೆಗಳಿಗೆ ಗೋವು ಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ವಾರ್ ರೂಂ ಸ್ಥಾಪಿಸಲಾಗಿದ್ದು, ಪ್ರತಿ ತಿಂಗಳು ಹತ್ತು ಸಾವಿರ ಕರೆಗಳು ಬರುತ್ತಿವೆ. ಪೊಲೀಸರೊಂದಿಗೆ ಪಶು ಸಂಗೋಪನಾ ಇಲಾಖೆಯ ವೈದ್ಯರು ಕೂಡ ಕೆಲಸ ಮಾಡುತ್ತಿದ್ದಾರೆ. ಗೋಶಾಲೆ ಸ್ಥಾಪನೆಗೆ ಪ್ರತಿ ಜಿಲ್ಲೆಗೆ ತಲಾ ₹50 ಲಕ್ಷ ಮಂಜೂರಾಗಿದೆ’ ಎಂದರು.
‘ಗೋಹತ್ಯೆ ನಿಷೇಧದ ನಂತರ ಪ್ರಾಣಿ ಸಂಗ್ರಹಾಲಯಗಳಲ್ಲಿ ಪ್ರಾಣಿಗಳಿಗೆ ಕೋಳಿ, ಕುರಿ ಮಾಂಸ ಕೊಡಲಾಗುತ್ತಿದ್ದು, ಅವುಗಳು ಅದಕ್ಕೆ ಹೊಂದಿಕೊಂಡಿಲ್ಲ ಎಂದು ಯಾವುದೇ ಜೂನಿಂದ ದೂರುಗಳು ಬಂದಿಲ್ಲ. ಆದರೆ, 13 ವರ್ಷ ಮೇಲಿನ ಕೋಣದ ಮಾಂಸ ಕೊಡಲು ಅವಕಾಶ ಇದೆ. ಅನ್ಯ ರಾಜ್ಯಗಳಿಂದ ಗೋಮಾಂಸ ರಫ್ತು ಮಾಡುತ್ತಿರುವುದರ ಬಗ್ಗೆ ನಾನೇನೂ ಪ್ರತಿಕ್ರಿಯಿಸಲಾರೆ. ನಾನು ನನ್ನ ರಾಜ್ಯದ ಬಗ್ಗೆ ಮಾತನಾಡುವೆ' ಎಂದು ಚವ್ಹಾಣ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.