ADVERTISEMENT

ಹೊಸಪೇಟೆ: ಡಿಡಿಪಿಐ ಅಮಾನತಿಗೆ ಬಂಜಾರ ಸಂಘದ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 15:53 IST
Last Updated 22 ಜೂನ್ 2024, 15:53 IST

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಡಿಡಿಪಿಐ ಯುವರಾಜ ನಾಯ್ಕ್ ಅವರನ್ನು ಅಮಾನತು ಮಾಡಿರುವುದಕ್ಕೆ ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘದ ವಿಜಯನಗರ ಜಿಲ್ಲಾ ಘಟಕ ಆಕ್ಷೇಪ ವ್ಯಕ್ತಪಡಿಸಿದೆ.

ಈ ಸಂಬಂಧ ಸಂಘದ ಅಧ್ಯಕ್ಷ ಡಿ.ಲಲ್ಯಾ ನಾಯ್ಕ್ ಅವರು ಶನಿವಾರ ಪತ್ರಿಕಾ ಹೇಳಿಕೆ ನೀಡಿದ್ದು, ಫಲಿತಾಂಶ ಕುಸಿತಕ್ಕೆ ಕೇವಲ ಡಿಡಿಪಿಐ ಅವರನ್ನು ಹೊಣೆಗಾರರನ್ನಾಗಿ ಮಾಡಿ ಅಮಾನತು ಮಾಡಿರುವುದು ಸರಿಯಲ್ಲ, ತಕ್ಷಣ ಅವರ ಅಮಾನತು ಆದೇಶ ರದ್ದುಪಡಿಸಿ ಮತ್ತೆ ಡಿಡಿಪಿಐ ಹುದ್ದೆಗೆ ನಿಯೋಜಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅನೇಕ ಜಿಲ್ಲಾಮಟ್ಟದ ಅಧಿಕಾರಿಗಳ ಲೋಪದೋಷಗಳಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ಆದರೆ, ಲಂಬಾಣಿ ಸಮಾಜಕ್ಕೆ ಸೇರಿದವರು ಎಂಬ ಕಾರಣಕ್ಕೆ ಯುವರಾಜ ನಾಯ್ಕ್‌ ಅವರ ವಿರುದ್ಧ ಕ್ರಮ ಜರುಗಿಸಲಾಗಿದೆ. ಕೆಡಿಪಿ ಸಭೆಯಿಂದ ಹೊರ ನಡೆಯಲು ಹೇಳಿ ಘೋರ ಅವಮಾನ ಮಾಡಲಾಗಿದೆ. ಇದನ್ನು ಸಂಘ ಖಂಡಿಸುತ್ತದೆ’ ಎಂದು ಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.