ಕಾನಹೊಸಹಳ್ಳಿ: ಆಹಾರ, ನೀರು ಅರಸಿಕೊಂಡು ವಿಜಯನಗರ ಜಿಲ್ಲೆಯ ಕಾನಹೊಸಹಳ್ಳಿಯ ಚಿಕ್ಕಜೋಗಿಹಳ್ಳಿ ಗ್ರಾಮಕ್ಕೆ ನುಗ್ಗಿದ ಕರಡಿಯೊಂದು ಅಪ್ಪಾಜಿ ಪೆಟ್ರೋಲ್ ಬಂಕ್ ಆವರಣದಲ್ಲಿ ಓಡಾಡಿದೆ.
ಕರಡಿ ಬಂದಾಗ ಪೆಟ್ರೋಲ್ ಬಂಕ್‌ನಲ್ಲಿ ಯಾರೊಬ್ಬರೂ ಇರಲಿಲ್ಲ.
ಕರಡಿಯ ಚಲನವಲನ ಬಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗುಡೇಕೋಟೆ ಧಾಮದಿಂದ ಕರಡಿಗಳು ಆಗಾಗ ಸಮೀಪದ ಗ್ರಾಮಗಳಿಗೆ ಲಗ್ಗೆ ಇಡುತ್ತಿರುತ್ತವೆ. ರೈತರ ಜಮೀನುಗಳಿಗೆ ನುಗ್ಗುವುದು ಸಾಮಾನ್ಯ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.