ADVERTISEMENT

ಹೊಸಪೇಟೆ ನಗರಸಭೆ ಅತಂತ್ರ; ಸಚಿವರ ತವರು ಕ್ಷೇತ್ರದಲ್ಲೇ ಬಿಜೆಪಿಗೆ ಹಿನ್ನಡೆ

ಕಾಂಗ್ರೆಸ್, ಪಕ್ಷೇತರರಿಗೆ ಹೆಚ್ಚಿನ ಸ್ಥಾನ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2021, 5:37 IST
Last Updated 30 ಡಿಸೆಂಬರ್ 2021, 5:37 IST

ಹೊಸಪೇಟೆ (ವಿಜಯನಗರ): ನಗರಸಭೆಯಲ್ಲಿ ಯಾವುದೇ ಪಕ್ಷಕ್ಕೆ‌ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಸ್ಥಿತಿ ಸೃಷ್ಟಿಯಾಗಿದೆ.

ಒಟ್ಟು 35 ವಾರ್ಡ್ ಗಳಲ್ಲಿ ಕಾಂಗ್ರೆಸ್ ಹಾಗೂ ಪಕ್ಷೇತರರು ತಲಾ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಹತ್ತು ಕ್ಷೇತ್ರಗಳಲ್ಲಿ ಗೆದ್ದರೆ, ಆಮ್ ಆದ್ಮಿ ಪಕ್ಷ ಒಂದು ಸ್ಥಾನದಲ್ಲಿ ಗೆಲ್ಲುವುದರ ಮೂಲಕ ಮೊದಲ ಚುನಾವಣೆಯಲ್ಲೇ ಖಾತೆ ತೆರೆದಿದೆ.

ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ತವರು ಕ್ಷೇತ್ರದಲ್ಲೇ ಬಿಜೆಪಿಗೆ ಹಿನ್ನಡೆಯಾಗಿದೆ. ಈ ಸಲ ನಗರಸಭೆಯಲ್ಲಿ ಬಿಜೆಪಿ ಬಾವುಟ ಹಾರಾಡುವುದು ಖಚಿತ ಎಂದು ಹಲವು ಸಲ ಆನಂದ್ ಸಿಂಗ್ ಹೇಳಿಕೆ ನೀಡಿದ್ದರು.

ADVERTISEMENT

ಹೊಸಪೇಟೆ ನಗರಸಭೆಯಲ್ಲಿ ಪಕ್ಷಗಳ ಬಲಾಬಲ

ಒಟ್ಟು ಸ್ಥಾನ -35
ಕಾಂಗ್ರೆಸ್ -12
ಬಿಜೆಪಿ- 10
ಎಎಪಿ-01
ಪಕ್ಷೇತರರು-12

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.