ADVERTISEMENT

ಹೊಸಪೇಟೆ | ಹಗರಣ: ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಜೂನ್ 28ಕ್ಕೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 16:07 IST
Last Updated 26 ಜೂನ್ 2024, 16:07 IST
ಬಂಗಾರಿ ಹನುಮಂತು
ಬಂಗಾರಿ ಹನುಮಂತು   

ಹೊಸಪೇಟೆ (ವಿಜಯನಗರ): ವಾಲ್ಮೀಕಿ ನಿಗಮದಲ್ಲಿನ ಹಗರಣ ಮತ್ತು ಕೇಂದ್ರ ಸರ್ಕಾರವು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಬಿಡುಗಡೆ ಮಾಡಿದ ₹83 ಕೋಟಿಗೂ ಅಧಿಕ ಅನುದಾನಕ್ಕೆ ಬಳಕೆ ಪ್ರಮಾಣಪತ್ರ ನೀಡದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಭಾಗವಾಗಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿದೆ.

ಪಕ್ಷದ ಪರಿಶಿಷ್ಟ ಪಂಗಡ ರಾಜ್ಯ ಘಟಕದ ಅಧ್ಯಕ್ಷ ಬಂಗಾರಿ ಹನುಮಂತು ಅವರು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

‘ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಿದರೆ ಮಾಜಿ ಸಚಿವ ನಾಗೇಂದ್ರ ಅವರ ಬಂಧನ ಸಾಧ್ಯತೆಯೂ ಇದೆ. ಈ ಹಗರಣದಲ್ಲಿ ನಿಗಮದ ಅಧ್ಯಕ್ಷ ಬಸವರಾಜ ದದ್ದಲ್‌ ಸಹಿತ ಅನೇಕ ಮಂದಿ ಶಾಮೀಲಾಗಿರುವ ಶಂಕೆ ಇದೆ’ ಎಂದರು.

ADVERTISEMENT

‍ಪಕ್ಷದ ಮುಖಂಡರಾದ ಅಶೋಕ್‌ ಜೀರೆ, ಅಯ್ಯಾಳಿ ತಿಮ್ಮಪ್ಪ, ಜಗದೀಶ್‌ ಕಮಟಗಿ, ಶಂಕರ್‌ ಮೇಟಿ, ಗುಜ್ಜಲ್ ಕಿರಣ್‌, ದ್ವಾರಕೇಶ್, ಚಂದ್ರು ದೇವಲಾಪುರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.