ವಿಜಯನಗರ (ಹೊಸಪೇಟೆ): ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ ಬಿಜಲಿ ಯೋಜನೆಯ ಅಡಿಯಲ್ಲಿ ಸೌರ ಫಲಕಗಳನ್ನು ಸ್ಥಾಪಿಸಲು ಮಾನದಂಡ ವೆಚ್ಚದ ಶೇ 60ರಷ್ಟು ಸಹಾಯಧನ ಒದಗಿಸಲಾಗುವುದು.
ಸೋಲಾರ್ ರೂಫ್ ಟಾಪ್ ಸಿಸ್ಟಂಗಳನ್ನು ಅಳವಡಿಸುವ ಮೂಲಕ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿರುವ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಇದು. ಮಾಹಿತಿಗಾಗಿ 1912ಗೆ ಕರೆಮಾಡಿ ಅಥವಾ ಹತ್ತಿರದ ಜೆಸ್ಕಾಂ ಕಚೇರಿಗೆ ಭೇಟಿ ನೀಡಬಹುದಾಗಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನ ಗ್ರಾಮೀಣ ಉಪ ವಿಭಾಗದ ಎಇಇ ತಿಳಿಸಿದ್ದಾರೆ.
––––
ಎಸ್‌ಟಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ
ವಿಜಯನಗರ (ಹೊಸಪೇಟೆ): ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ 100 ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ₹25 ಸಾವಿರ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಆರ್ಹ ವಿದ್ಯಾರ್ಥಿಗಳು ಡಿ.14ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.