ಹೊಸಪೇಟೆ (ವಿಜಯನಗರ): ಮಕರ ಸಂಕ್ರಮಣದ ಅಂಗವಾಗಿ ತಾಲ್ಲೂಕಿನ ಹಂಪಿ ಸಮೀಪದ ತುಂಗಭದ್ರಾ ನದಿಯಲ್ಲಿ ಅಪಾರ ಜನ ಭಾನುವಾರ ಪುಣ್ಯಸ್ನಾನ ಮಾಡಿದರು.
ಶನಿವಾರ ಸಂಜೆಯೇ ವಿವಿಧ ಕಡೆಗಳಿಂದ ಅಪಾರ ಭಕ್ತರು ಹಂಪಿಗೆ ಬಂದು ತಂಗಿದ್ದರು. ಭಾನುವಾರ ಬೆಳಕು ಹರಿಯುತ್ತಿದ್ದಂತೆ ಮೈಕೊರೆಯುವ ಚಳಿಯಲ್ಲಿ ಜನ ತುಂಗಭದ್ರೆಯಲ್ಲಿ ಮಿಂದೆದ್ದರು. ಅನಂತರ ವಿರೂಪಾಕ್ಷೇಶ್ವರ ಸ್ವಾಮಿ ದರ್ಶನ ಪಡೆದರು. ಎಳ್ಳು, ಬೆಲ್ಲ ವಿನಿಮಯ ಮಾಡಿಕೊಂಡು ಪರಸ್ಪರ ಶುಭ ಕೋರಿದರು. ಬಳಿಕ ಹಂಪಿ ಸ್ಮಾರಕಗಳನ್ನು ಕಣ್ತುಂಬಿಕೊಂಡು, ಜೊತೆಗೆ ತಂದಿದ್ದ ಬುತ್ತಿ ತೆಗೆದು ಆಹಾರ ಸವಿದರು.
ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದದ್ದರಿಂದ ಹಂಪಿಯಲ್ಲಿ ಜಾತ್ರೆಯ ವಾತಾವರಣ ಸೃಷ್ಟಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.