ಹೊಸಪೇಟೆ (ವಿಜಯನಗರ): ‘ಶಿಕ್ಷಕರಿಗೆ ಮಕ್ಕಳ ಕಾಯ್ದೆ ಕಾನೂನುಗಳ ಅರಿವು ತುಂಬಾ ಅವಶ್ಯಕತೆ ಇದೆ, ಏಕೆಂದರೆ ಮಕ್ಕಳು ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ಒಳಗಾಗಬಾರದು, ಅದನ್ನು ಶಿಕ್ಷಕರು ಖಾತರಿಪಡಿಸಬೇಕಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.
ಇಲ್ಲಿ ಶುಕ್ರವಾರ ನಡೆದ ಮಕ್ಕಳ ರಕ್ಷಣಾ ನೀತಿ-2016 (ಪರಿಷ್ಕರಣೆ-2023), ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಪೋಕ್ಸೊ ಕಾಯ್ದೆ-2012 ಕುರಿತು ಪ್ರೌಢಶಾಲಾ ಮುಖೋಪಾಧ್ಯಾಯರಿಗೆ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಯೂನಿಸೆಫ್’ ಪ್ರತಿನಿಧಿ ರಾಘವೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ವಿವಿಧ ಕಾಯ್ದೆ, ಕಾನೂನುಗಳ ಬಗ್ಗೆ ಅವರು ವಿವರವಾದ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ಅಲಿ ಅಕ್ರಂ ಷಾ, ಎಎಸ್‌ಪಿ ಸಲೀಂ ಪಾಷಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ್ ಉಂಕಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.