ADVERTISEMENT

ಜಿಲ್ಲಾ ಆಸ್ಪತ್ರೆ ಕಟ್ಟಡ: 400 ಹಾಸಿಗೆಗೆ ಹೆಚ್ಚಿಸಲು ಸಿಎಂ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 11:23 IST
Last Updated 21 ಜೂನ್ 2024, 11:23 IST
<div class="paragraphs"><p>ತ್ರೈಮಾಸಿಕ ಕೆಡಿಪಿ ಸಭೆ</p></div>

ತ್ರೈಮಾಸಿಕ ಕೆಡಿಪಿ ಸಭೆ

   

ಹೊಸಪೇಟೆ (ವಿಜಯನಗರ): ನಗರದಲ್ಲಿ ಸದ್ಯ 200 ಬೆಡ್ ಆಸ್ಪತ್ರೆ ಕಾರ್ಯ ನಡೆಯುತ್ತಿದೆ. ಆದರೆ ಬೇಡಿಕೆ ಹಿನ್ನೆಲೆಯಲ್ಲಿ ಇದನ್ನು 400 ಬೆಡ್ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಈ ಸೂಚನೆ ನೀಡಿದರು.

ADVERTISEMENT

ಗ್ರಾಮೀಣಾಭಿವೃದ್ಧಿ ಇಲಾಖೆ: ನರೇಗಾದಲ್ಲಿ ಸಮಯಕ್ಕೆ ಸರಿಯಾಗಿ ಮಾನವ ದಿನಗಳ ಕೂಲಿ ಹಣ ಪಾವತಿಯಾಗಬೇಕು. ಅನಗತ್ಯ ವಿಳಂಬ ಆಗಬಾರದು ಎನ್ನುವ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.

ನರೇಗಾದಲ್ಲಿ ಅಂಗನವಾಡಿ ಕಟ್ಟಡಗಳು, ಶಾಲೆ ಕೊಠಡಿಗಳು, ಕಾಂಪೌಂಡ್ ಬೇಡಿಕೆಗಳನ್ನು ಈಡೇರುಸಬೇಕು. ಇದರ ಜತೆಗೆ ಊಟದ ಗುಣಮಟ್ಟ , ಅಡುಗೆ ಕೋಣೆಗಳು ಮತ್ತು ಶೌಚಾಲಯಗಳ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಪ್ರಮಾಣಕ್ಕೆ ತಕ್ಕಂತೆ ಸವಲತ್ತುಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಿಇಒ ಹೊಣೆ: ಕಲುಶಿತ ನೀರು ಕುಡಿದ ಜನರ ಆರೋಗ್ಯ ಮತ್ತು ಜೀವಕ್ಕೆ ತೊಂದರೆ ಆದರೆ ಅದಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ಗಳೇ ಹೊಣೆ ಎಂದು ಸಿಎಂ ಎಚ್ಚರಿಸಿದರು.

ಜಿಲ್ಲೆಯಲ್ಲಿ ಹಿಂದಿನ ಸರ್ಕಾರ ಈ ಭಾಗಕ್ಕೆ ಒಂದೂ ಮನೆ ಕೊಟ್ಟಿಲ್ಲ. ನಾವು ₹500 ಕೋಟಿ ಕೊಟ್ಟ ಬಳಿಕ 1,500 ಮನೆಗಳನ್ನು ಪೂರ್ಣಗೊಳಿಸಿ ಜನರಿಗೆ ವಿತರಿಸಿದ್ದೇವೆ. ಬಾಕಿ 1,600 ಕ್ಕೂ ಅಧಿಕ ಮನೆಗಳನ್ನು ಸ್ಲಂ ಬೋರ್ಡ್ನಿಂದ ಪೂರ್ಣಗೊಳಿಸಿ ಜನರಿಗೆ ವಿತರಿಸುತ್ತೇವೆ. ಒಟ್ಟು ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮನೆಗಳನ್ನು ಈ ವರ್ಷದೊಳಗೆ ವಿತರಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಈಗಾಗಲೇ ಜಿಲ್ಲೆಯಲ್ಲಿ 41 ಕೆರೆಗಳನ್ನು ತುಂಬಿಸಿ ಚಾಲನೆ ನೀಡಲಾಗಿದೆ. ಈ ಮಳೆಗಾಲದಲ್ಲಿ ಬಾಕಿ ಇರುವ 9 ಕೆರೆಗಳನ್ನು ತುಂಬಿಸಿ ಲೋಕಾರ್ಪಣೆ ಮಾಡಲು ಸೂಚಿಸಿದ್ದೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.