ಹೂವಿನಹಡಗಲಿ: ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕದ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದ್ದು, 34 ನಿರ್ದೇಶಕ ಸ್ಥಾನಗಳಿಗೆ 51 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಎಂ.ಪಿ.ಎಂ. ಪಕ್ಕೀರಗೌಡ ತಿಳಿಸಿದರು.
ಅ.19ರಂದು ನಾಮಪತ್ರ ಪರಿಶೀಲನೆ, 21ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. 28 ರಂದು ಚುನಾವಣೆ ನಡೆಯಲಿದ್ದು, ಅಂದೇ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು. ಸಹಾಯಕ ಚುನಾವಣಾಧಿಕಾರಿ ಸಿ.ಕಿರಣ್ ಕುಮಾರ್, ಸಿಬ್ಬಂದಿ ಪತ್ರೇಶ್ ರೆಡ್ಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.