ADVERTISEMENT

ಹೊಸಪೇಟೆ | ಸಕ್ಕರೆ ಕಾರ್ಖಾನೆ ಆರಂಭಿಸಲು ಒತ್ತಾಯ: ಸಚಿವರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 15:16 IST
Last Updated 5 ಅಕ್ಟೋಬರ್ 2024, 15:16 IST
ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸುವಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು
ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸುವಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು   

ಹೊಸಪೇಟೆ(ವಿಜಯನಗರ): ನಗರದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸುವುದು ಮತ್ತು ಸುಸ್ತಿ ಸಾಲ ಬಡ್ಡಿ ಮನ್ನಾ ಮಾಡುವಂತೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಶನಿವಾರ ಮನವಿ ಸಲ್ಲಿಸಿದರು.

‘2016-17ನೇ ಸಾಲಿನಲ್ಲಿ ನಗರದಲ್ಲಿ ಸಕ್ಕರೆ ಕಾರ್ಖಾನೆ ಬಂದ್ ಆಗಿದೆ. ಇದರಿಂದ ಇದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತುಂಬಾ ತೊಂದರೆ ಆಗುತ್ತಿದೆ. ಅಲ್ಲದೆ, ಸಕ್ಕರೆ ಕಾರ್ಖಾನೆಗಾಗಿ ಸುಮಾರು 77 ಎಕರೆ ಜಾಗವನ್ನು ಸರ್ಕಾರ ಗುರುತಿಸಿದ್ದು, ಈವರೆಗೂ ಇದರ ಬಗ್ಗೆ ಯಾಕೆ ಯಾವುದೇ ಕ್ರಮ ಜರುಗಿಸಿಲ್ಲ’ ಎಂದು ಪದಾಧಿಕಾರಿಗಳು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಕಾರ್ಖಾನೆ ಆರಂಭಿಸುವದಾಗಿ ಸಿದ್ದರಾಮಯ್ಯ ಅವರು ಮಾತು ಚುನಾವಣೆಗೂ ಮುಂಚೆ ಕೊಟ್ಟಿದ್ದರು. ಆದರೆ ಸರ್ಕಾರ ಬಂದು ಒಂದೂವರೆ ವರ್ಷ ಕಳೆದರೂ ಕ್ರಮವಹಿಸಿಲ್ಲ. ಆದ್ದರಿಂದ ಈ ಕೂಡಲೇ ಸಕ್ಕರೆ ಕಾರ್ಖಾನೆ ಆರಂಭಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ರೈತರ ಸುಸ್ತಿ ಸಾಲ ಬಡ್ಡಿ ಮನ್ನಾ ಮಾಡಬೇಕು. ಮೇ ತಿಂಗಳಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡಬೇಕು, ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಟಿ.ನಾಗರಾಜ, ತಾಲ್ಲೂಕು ಘಟಕದ ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ಎಂ.ಜಡೆಪ್ಪ, ಕೆ.ರಾಮಾಂಜಿನಿ, ಗಾಳೆಪ್ಪ, ರೇವಣ ಸಿದ್ದಪ್ಪ, ಎಚ್.ಹನುಮಂತರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.