ಹೊಸಪೇಟೆ (ವಿಜಯನಗರ): ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೋಧನೆ ಮಾಡುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಸೋಮವಾರ ಇಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ಮನವಿ ಸಲ್ಲಿಸಲಾಯಿತು.
ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಉಪನ್ಯಾಸಕರು ಪುನೀತ್ ರಾಜ್‌ಕುಮಾರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದರು. ಮದಕರಿನಾಯಕ ವೃತ್ತ, ವಾಲ್ಮೀಕಿ ಸರ್ಕಲ್, ಟಿ.ಬಿ.ಡ್ಯಾಂ ರಸ್ತೆ ಮೂಲಕ ಸಾಗಿದ ಜಾಥಾ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ, ಸರ್ಕಾರಕ್ಕೆ ಮನವಿ ಕಳುಹಿಸಿಕೊಡಲಾಯಿತು.
‘ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಅವಧಿಯಲ್ಲೇ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವ ನಿರ್ಧಾರ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.
ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗುಜ್ಜಲ ಹುಲುಗಪ್ಪ, ಎ.ಮಲ್ಲಿಕಾರ್ಜುನ, ಎಂ.ಶಿವಮೂರ್ತಿ, ಸೋಮೇಶ ಉಪ್ಪಾರ, ಷಣ್ಮುಖಪ್ಪ, ನಾಗವೇಣಿ ಸೊಸಲೆ, ಗಿರಿಜಾ ಇದ್ದರು.
ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯದಾದ್ಯಂತ ಅತಿಥಿ ಉಪನ್ಯಾಸಕರು ನ.3ರಿಂದ ಮುಷ್ಕರ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.