ಹೊಸಪೇಟೆ (ವಿಜಯನಗರ): ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರುವರಿ 2ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 2ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದು, ಮೊದಲ ದಿನ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಸೂಚಿಸಲಾಗಿದೆ ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆಯಿಂದ ಮಾಡುವಂತೆ ಹಾಗೂ ಸ್ಥಳೀಯ ಕಲಾವಿದರು ಹಾಗೂ ಸಾಂಸ್ಕೃತಿಕ ಕಲೆಗಳಿಗೆ ಒತ್ತು ನೀಡಲು ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಸಾಂಸ್ಕೃತಿಕ ವಲಯದವರನ್ನು ಜತೆಗೂಡಿಸಿಕೊಂಡು ಉತ್ಸವ ಯಶಸ್ವಿಗೊಳಿಸಲು ತಿಳಿಸಿದ್ದಾರೆ.
ಹಂಪಿ ಉತ್ಸವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರು ಸೇರಿ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಸದ್ಯದಲ್ಲೇ ಸಭೆ ಸಹ ನಡೆಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.